ಮಹಾದಾಯಿ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯ: ಸಚಿವ ದೇಶಪಾಂಡೆ

Source: sonews | By sub editor | Published on 16th August 2018, 4:31 PM | Coastal News | State News | Don't Miss |

ಕಾರವಾರ: ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ನ್ಯಾಯಾಧಿಕರಣವು ನೀಡಿರುವ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಬುಧವಾರ ಹೇಳಿದ್ದಾರೆ.
    
``ಮಹಾದಾಯಿ ನದಿಯಿಂದ 36.558 ಟಿಎಂಸಿ ಅಡಿ ನೀರನ್ನು ಕರ್ನಾ‍ಟಕವು ಕೇಳಿತ್ತು. ಆದರೆ, ನ್ಯಾಯಾಧಿಕರಣವು ನಮಗೀಗ ಕೇವಲ 13.42 ಟಿಎಂಸಿ ಅಡಿಗಳಷ್ಟು ನೀರನ್ನು ಮಾತ್ರ ನಮಗೆ ನೀಡಿದೆ. ಇದು ರಾಜ್ಯದ ಅಗತ್ಯಗಳಿಗೆ ಸಾಕಾಗುವುದಿಲ್ಲ,'' ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.
    
``ರಾಜ್ಯ ಸರಕಾರವು ನ್ಯಾಯಾಧಿಕರಣದ ತೀರ್ಪನ್ನು ಸದ್ಯದಲ್ಲೇ ಕೂಲಂಕಷವಾಗಿ ಅಧ್ಯಯನ ಮಾಡಲಿದೆ. ಇದಾದ ನಂತರ, ಮಹಾದಾಯಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯವಾಗಿ ಸಿಗಬೇಕಾದ ಪಾಲನ್ನು ಪಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಷಯದಲ್ಲಿ ರಾಜ್ಯದ ಹಿತವನ್ನು ಕಾಪಾಡಲು ಸರಕಾರ ಬದ್ಧವಾಗಿದೆ,'' ಎಂದು ದೇಶಪಾಂಡೆ ನುಡಿದಿದ್ದಾರೆ.

ಮಳೆ ಹಾವಳಿ: ಅಗತ್ಯ ಪರಿಹಾರಕ್ಕೆ ಕ್ರಮ
    
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಅಪಾರ ಮಳೆಯಿಂದಾಗಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ಇದರಿಂದ ಉಂಟಾಗಿರುವ ಹಾನಿ ಅಥವಾ ಸಂಕಷ್ಟ ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಕಂದಾಯ ಸಚಿವರು ಇದೇ ಸಂದರ್ಭದಲ್ಲಿ ನುಡಿದರು. 
    
``ಪ್ರಾಣಹಾನಿ, ಮನೆಹಾನಿ ಮತ್ತು ಜಾನುವಾರುಗಳ ಸಾವು ಸಂಭವಿಸಿದರೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆಲ್ಲ ಸೂಚಿಸಲಾಗಿದೆ. ಇದಕ್ಕಾಗಿ ಪ್ರತಿಯೊಬ್ಬ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲೂ ಸಾಕಷ್ಟು ಹಣ ಇರುವಂತೆ ನೋಡಿಕೊಳ್ಳಲಾಗಿದೆ. ಸದ್ಯಕ್ಕೆ ರಾಜ್ಯದ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಈ ಬಾಬ್ತಿಗಾಗಿ 200 ಕೋಟಿ ರೂ.ಗಳಿಗಿಂತಲೂ ಹೆಚ್ಚು ಹಣವಿದೆ,'' ಎಂದು ದೇಶಪಾಂಡೆ ವಿವರಿಸಿದ್ದಾರೆ. 
    
``ಕೇರಳ ಮತ್ತು ಮಹಾರಾಷ್ಟ್ರಗಳಲ್ಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗಿವೆ. ಹೀಗಾಗಿ ಎಲ್ಲ ಅಣೆಕಟ್ಟುಗಳಿಂದಲೂ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಆದ್ದರಿಂದ ನದೀತೀರದಲ್ಲಿರುವ ಜನರು ಮುಂಜಾಗ್ರತೆ ವಹಿಸಬೇಕು. ಮಲೆನಾಡಿನಲ್ಲೂ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ. ಸರಕಾರವು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯ ನೆರವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ,'' ಎಂದು ಅವರು ಹೇಳಿದ್ದಾರೆ.

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...