ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟಿನ ಮೀನುಗಾರರ ಮುಬೈಲ್ ರಿಂಗಣಿಸಿತೆ?

Source: sonews | By Staff Correspondent | Published on 31st January 2019, 11:59 PM | Coastal News | State News | Don't Miss |

* ಒಂದಲ್ಲ ಎರೆಡೆರಡು ಬಾರಿ ರಿಂಗ್ ಆದ ಮುಬೈಲ್ ಫೋನ್

* ಪೊಲೀಸರಿಂದ ನಿರಾಕರಣೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ಹೊರಜಗತ್ತಿನ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟಿನಲ್ಲಿದ್ದ 7 ಮಂದಿ ಮೀನುಗಾರರಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರ ಮೊಬೈಲ್ ಫೋನ್‌ಗಳು ರಿಂಗ್ ಆಗಿದ್ದು, ಮತ್ತೊಮ್ಮೆ ಕರೆ ಮಾಡಿದಾಗ ಮರುಸಂಪರ್ಕ ಸಿಗದ ಬಗ್ಗೆ ಉತ್ತರ ಕನ್ನಡದಿಂದ ಮಾಹಿತಿ ಬಂದಿದೆ.

ಮೀನುಗಾರರು ಕಣ್ಮರೆಯಾಗಿ ಇದೀಗ 45 ದಿನಗಳೇ ಕಳೆದಿದ್ದು, ಫೋನ್ ರಿಂಗ್ ಆಗಿರುವುದು ಕುಟುಂಬಿಕರಲ್ಲಿ ಆಸೆ ಚಿಗುರುವಂತೆ ಮಾಡಿದೆ. ಒಂದಲ್ಲ ಎರಡೆರಡು ಬಾರಿ ಫೋನ್ ರಿಂಗ್ ಆಗಿದೆ. ಆದರೆ ಪೊಲೀಸರು ಈ ವರದಿಯನ್ನೇ ನಿರಾಕರಿಸಿದ್ದಾರೆ. ಈ ಬಗ್ಗೆ ಯಾವುದೇ ತಾಂತ್ರಿಕ ಸಾಕ್ಷಿಗಳಿಲ್ಲ. ಈಗಾಗಲೇ ಇದನ್ನು ಪರಿಶೀಲಿಸಲಾಗಿದ್ದು, ಇದೊಂದು ಸುಳ್ಳು ಸುದ್ದಿ ಎಂದು ತಳ್ಳಿ ಹಾಕಿದ್ದಾರೆ.

ಈ ಕುರಿತು ಮಲ್ಪೆ ಮೀನುಗಾರರ ಸಂಘದ ಕಾರ್ಯದರ್ಶಿ ಗೋಪಾಲ್ ಆರ್.ಕೆ. ಇವರನ್ನು ಸಂಪರ್ಕಿಸಿದಾಗ, ಇಂಥ ಮಾಹಿತಿಗಳು ನಮಗೂ ಬಂದಿದ್ದು, ಆದರೆ ಇದನ್ನು ಯಾರೂ ಖಚಿತಪಡಿಸುತ್ತಿಲ್ಲ. ಎಲ್ಲವೂ ಅಂತೆ-ಕಂತೆಗಳಲ್ಲೇ ಇದ್ದು, ಸ್ಪಷ್ಟತೆ ಇಲ್ಲ. ಹೀಗಾಗಿ ಈ ಸುದ್ದಿಯನ್ನು ನಾವು ಖಚಿತಪಡಿಸಲು ಸಾದ್ಯವಾಗುತ್ತಿಲ್ಲ ಎಂದರು.

ಉತ್ತರ ಕನ್ನಡದಿಂದ ಬಂದ ವರದಿಯಂತೆ ಕುಮಟಾದ ಲಕ್ಷ್ಮಣ ಅವರ ಮಗಳು ಬುಧವಾರ ಸಂಜೆ 7:30ಕ್ಕೆ ಮೊಬೈಲ್‌ಗೆ ಕರೆ ಮಾಡಿದ್ದು, ಆಗ ಫೋನ್ ರಿಂಗ್ ಆಗಿದೆ. ಬಳಿಕ ಮತ್ತೊಮ್ಮೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿಲ್ಲ. ‘ರಾತ್ರಿ 10 ಗಂಟೆಗೆ ಸ್ವತಃ ನಾನೇ ಭಟ್ಕಳದ (ಪಾಂಡು) ರವಿ ಮಂಕಿ ಅವರ ಪೋನ್‌ಗೆ ಕರೆ ಮಾಡಿದ್ದೇನೆ. ಆಗ ರಿಂಗ್ ಆಗಿದ್ದು, ಬಳಿಕ ಇನ್‌ಕಮಿಂಗ್ ಕಾಲ್ ಸಂಪರ್ಕ ಕಡಿತವಾಗಿದೆ ಎನ್ನುವ ಸಂದೇಶ ಬಂದಿದೆ ಎನ್ನುತ್ತಾರೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ನಿವಾಸಿ ನಾಪತ್ತೆಯಾದ ಹರೀಶ್ ಅವರ ಮಾವ ಪಾಂಡು ಮೊಗೇರ.

ಗುರುವಾರ ಬೆಳಗ್ಗೆ 8 ಗಂಟೆಗೆ ನಾನು ಮತ್ತೆ ಅದೇ ನಂಬರ್‌ಗೆ ಕರೆ ಮಾಡಿದ್ದು, ರಿಂಗ್ ಕೇಳಿಸಿದೆ. ಈ ಬಗ್ಗೆ ಕಾರವಾರ ಡಿವೈಎಸ್ಪಿ, ಕರಾವಳಿ ಕಾವಲು ಪಡೆ, ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಮುಖಂಡರ ಗಮನಕ್ಕೂ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

ವಾರದೊಳಗೆ ಹೋರಾಟ: ಉತ್ತರ ಕನ್ನಡದ ಸಂಸದ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಲ್ಲಿ ಜ.26ರೊಳಗೆ ಹುಡುಕಿ ಕೊಡದೇ ಹೋದರೆ ಪ್ರತಿಭಟನೆ ಮಾಡುವ ಬಗ್ಗೆ ಎಚ್ಚರಿಕೆ ಕೊಟ್ಟಿದ್ದೇವೆ. 7 ಮಂದಿ ಮೀನುಗಾರರ ಕಣ್ಮರೆ ಪ್ರಕರಣವನ್ನು ಯಾರೊಬ್ಬರೂ ಗಂಭೀರವಾಗಿ ತೆಗೆದು ಕೊಂಡಿಲ್ಲ. ರಾಜ್ಯ ಸರಕಾರವನ್ನು ಪ್ರಶ್ನಿಸುವ ಕೆಲಸವೂ ಮಾಡಿಲ್ಲ. ಇದನ್ನೆಲ್ಲ ಖಂಡಿಸಿ ವಾರದೊಳಗೆ ದ.ಕ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಉಗ್ರ ಹೋರಾಟ ಮಾಡುವುದಾಗಿ ಪಾಂಡು ಮೊಗೇರ ತಿಳಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...