ಭಟ್ಕಳ: ಮಳೆಗಾಲದಲ್ಲಿ ಮುಗಿಯದ ಪಳ್ಳಿಹೊಳೆ ಸೇತುವೆ ವ್ಯಥೆ; ಮುಗುಚಿ ಬಿದ್ದ ಮೋಟಾರ್ ಬೈಕ್; ಪ್ರಾಣಾಪಾಯದಿಂದ ಪಾರು

Source: S O New service | By I.G. Bhatkali | Published on 29th June 2018, 11:38 PM | Coastal News |

ಭಟ್ಕಳ: ತಾಲೂಕಿನ ಶಿರಾಲಿ ಅಳ್ವೆಕೋಡಿಯನ್ನು ಸಂಪರ್ಕಿಸುವ ಪಳ್ಳಿಹೊಳೆ ಸೇತುವೆಯ ಕಥೆ ಮಳೆಗಾಲದಲ್ಲಿ ವ್ಯಥೆಯಾಗಿ ಪರಿಣಮಿಸಿದೆ. ತಾತ್ಕಾಲಿಕ ಸಂಪರ್ಕ ರಸ್ತೆ ಕೊಚ್ಚಿ ಹೋದ ನಂತರ ಒಡ್ಡಿನ ಮೇಲೆ ಸಿಮೆಂಟ್ ಕಾಂಕ್ರೀಟ್ ಹಾಕಿ ಕಲ್ಪಿಸಲಾಗಿದ್ದ ಪರ್ಯಾಯ ಮಾರ್ಗ ಇದೀಗ ಜನರಿಗೆ ಆಪತ್ತನ್ನು ತಂದೊಡ್ಡಲಾರಂಭಿಸಿದೆ.

ಮೋಟಾರ್ ಬೈಕ್‍ವೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಪರಿಣಾಮವಾಗಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರನ್ನು ಶಿರಾಲಿಯ ಮಹ್ಮದ್ ಇಮ್ತಿಯಾಜ್ ಫಿರ್ಜಾದೆ (48) ಎಂದು ಗುರುತಿಸಲಾಗಿದೆ. ಇವರ ಕೈ ಮತ್ತು ಕಾಲಿಗೆ ಏಟು ತಗುಲಿದ್ದು, ಸುತ್ತಮುತ್ತಲಿನ ಜನರ ಸಮಯ ಪ್ರಜ್ಞೆಯಿಂದಾಗಿ ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ. ಇವರು ಭಟ್ಕಳದಿಂದ ಶಿರಾಲಿ ತಟ್ಟಿಹಕ್ಕಲ್‍ನತ್ತ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಿರಾಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ ನಾಯ್ಕ, ತಹಸೀಲ್ದಾರ ವಿ.ಎನ್.ಬಾಡ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುತ್ತಿಗೆದಾರರಿಗೆ ತರಾಟೆ: ಘಟನೆ ನಡೆದ ಕೆಲ ಹೊತ್ತಿನಲ್ಲಿಯೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿ, ಅಲ್ಲಿಯೇ ಇದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಸೇತುವೆ ನಿರ್ಮಾಣ ಕಾಮಗಾರಿ ವಿಳಂಬದಿಂದಾಗಿ ಸಮಸ್ಯೆ ಉದ್ಭವಿಸಿದೆ. ಸೇತುವೆಯನ್ನು ಆದಷ್ಟು ಬೇಗ ಮಾಡಿ ಮುಗಿಸುವ ಭರವಸೆಯೊಂದಿಗೆ ಜನರೂ ಸಹಕಾರ ನೀಡಿದ್ದಾರೆ. ಆದರೆ ಜನರ ಕಳಕಳಿಯನ್ನು ಆಲಿಸದೇ ಹಳೆಯ ಸೇತುವೆಯನ್ನು ಕೆಡುಹಿ ಅವೈಜ್ಞಾನಿಕವಾಗಿ ತಾತ್ಕಾಲಿಕ ಸಂಪರ್ಕ ರಸ್ತೆಯನ್ನು ನಿರ್ಮಿಸಿದ್ದೇ ಎಲ್ಲ ಅನಾಹುತಕ್ಕೂ ಕಾರಣವಾಗಿದೆ. ಈಗ ಬೇರೆ ದಾರಿ ಇಲ್ಲ. ಶೀಘ್ರವಾಗಿ ಸೇತುವೆ ನಿರ್ಮಿಸುವುದೇ ಎಲ್ಲದಕ್ಕೂ ಪರಿಹಾರವಾಗಿದೆ ಎಂದು ಜನರು ಅಸಮಾಧಾನವನ್ನು ಹೊರ ಹಾಕಿದರು. 

 ಸೋಮವಾರ ಸಭೆ : ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾವು ಘಟನೆ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದು, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೋಮವಾರ ವಿಶೇಷ ಸಭೆಯನ್ನು ನಡೆಸಲಾಗುವುದು ಎಂದು ತಹಸೀಲ್ದಾರ ವಿ.ಎನ್.ಬಾಡ್ಕರ್ ತಿಳಿಸಿದ್ದಾರೆ. ಅವರು ಘಟನೆಯ ಕುರಿತು ಪ್ರತಿಕ್ರಿಯೆ ನೀಡಿ, ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು, ಶಿರಾಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಪಿಡಿಓ, ಗುತ್ತಿಗೆದಾರರನ್ನು ಸಭೆಗೆ ಹಾಜರಿರುವಂತೆ ತಿಳಿಸಲಾಗಿದ್ದು, ಅಲ್ಲಿಯೇ ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು ಎಂದು ವಿವರಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...