ಮಂಗಳೂರು:ಕಳೆದ ಎರಡು ದಿನಗಳ ಕಾಲ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಹಿಂದಕ್ಕೆ

Source: shabbir | By Arshad Koppa | Published on 29th April 2017, 11:03 AM | Coastal News |

ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡಿರುವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳ ಕಾಲ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈ ಬಿಡಲಾಗಿದೆ ಎಂದು ನಿವೇಶನ ರಹಿತರ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಶಕ್ತಿನಗರ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ  ಅವರು, ಶಕ್ತಿನಗರದಲ್ಲಿ ಗುರುತಿಸಲ್ಪಟ್ಟಿರುವ ಜಾಗದಲ್ಲಿ ನಿವೇಶನ ರಹಿತರಿಗೆ ಮನೆ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಅಸಡ್ಡೆ ತೋರಿಸುತಿದ್ದಾರೆ. ನಗರ ಪಾಲಿಕೆ ಮುಂಬಾಗ ನಡೆದ ಮುಷ್ಕರ ನಂತರ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ವಸತಿ ಯೋಜನೆ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದರು. ಮುಂದಿನ ಮೂರು ತಿಂಗಳಲ್ಲಿ ನಿವೇಶನಕ್ಕೆ ಬೇಕಾದ ಎಲ್ಲಾ ಪ್ರಕ್ರಿಯೆಗಳು ಕ್ರಮಪ್ರಕಾರ ನಡೆಯಲಿದೆ. ತದನಂತರವೂ ವಿಳಂಬವಾದಲ್ಲಿ ಮತ್ತೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದರು.
ಸುದ್ದಿಗೋಷ್ಟಿಯಲ್ಲಿ ನೂತನ್ ಕೊಂಚಾಡಿ, ಪ್ರೇಮನಾಥ ಮೊದಲಾದವರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...