ಮಂಗಳೂರಿನಿಂದ ಭಟ್ಕಳ ಮಾರ್ಗವಾಗಿ ಹೈದರಾಬಾದ್‌ಗೆ ಮಲ್ಟಿ ಆಕ್ಸೆಲ್ ಬಸ್

Source: sonews | By Staff Correspondent | Published on 26th December 2018, 11:11 PM | Coastal News | State News | Don't Miss |

ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ಸಿಂಧನೂರು, ರಾಯಚೂರು ಮಾರ್ಗವಾಗಿ ಹೈದರಾಬಾದ್‌ಗೆ ಹಾಗೂ ಹೈದರಾಬಾದ್‌ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಲ್ಟಿ ಆಕ್ಸೆಲ್ ಬಸ್ ಕಾರ್ಯಾಚರಿಸಲಿದೆ.

ಈ ಸಾರಿಗೆಯು ಮಂಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಉಡುಪಿ 4, ಮಣಿಪಾಲ 4:10, ಕುಂದಾಪುರ 5, ಭಟ್ಕಳ 6 ಗಂಟೆಗೆ ತಲುಪಿ ಇದೇ ಮಾರ್ಗವಾಗಿ ಹೈದರಾಬಾದ್‌ಗೆ ಬೆಳಗ್ಗೆ 8:30ಕ್ಕೆ ತಲುಪಲಿದೆ. ಮರುಪ್ರಯಾಣದಲ್ಲಿ ಹೈದರಾಬಾದ್‌ನಿಂದ ಸಂಜೆ 5 ಗಂಟೆಗೆ ಹೊರಟು ರಾಯಚೂರು 9:20, ಕುಂದಾಪುರ 8:50, ಮಂಗಳೂರಿಗೆ ಬೆಳಗ್ಗೆ 10:30ಕ್ಕೆ ತಲುಪಲಿದೆ.

ಈ ಸಾರಿಗೆಗೆ ವಾರದ ದಿನಗಳಾದ ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಒಟ್ಟು ಪ್ರಯಾಣ ದರ 1,100 ರೂ. ಹಾಗೂ ವಾರಾಂತ್ಯದ ದಿನಗಳಾದ ಶುಕ್ರವಾರ, ಶನಿವಾರ ಮತ್ತು ರವಿವಾರಗಳಂದು ಒಟ್ಟು ಪ್ರಯಾಣ ದರ 1,700 ರೂ.ನ್ನು ಪಡೆದು ಸಾರಿಗೆ ಕಾರ್ಯಾಚರಣೆ ನಡೆಸಲಿದೆ.

ಈ ಸಾರಿಗೆಗೆ ‘ಅವತಾರ್’ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ಸಾರಿಗೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...