ಮಂಗಳೂರು:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಟ: ಆರೋಪಿಗಳು ಪೊಲೀಸರು ವಶಕ್ಕೆ

Source: so news | By MV Bhatkal | Published on 14th February 2019, 1:21 PM | Coastal News | Don't Miss |

ಮಂಗಳೂರು:ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ನಗರದ ವೆಲೆನ್ಸಿಯಾ ಬಳಿ ಪೊಲೀಸರು ಬಂಧಿಸಿದ್ದಾರೆ.
ವೆಲೆನ್ಸಿಯಾ ಉಜ್ಜೋಡಿ ನಿವಾಸಿ ಪ್ರೀತಂ ಜೆ.(31) ಬಂಧಿತ ಆರೋಪಿ.
ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್‌ಪೋನನ್ನು ವಶಪಡಿಸಿದ್ದು, ವಶಪಡಿಸಿದ ಎಲ್ಲ ಸೊತ್ತುಗಳ ಒಟ್ಟು ಮೌಲ್ಯ 90,220 ರೂ. ಎಂದು ಅಂದಾಜಿಸಲಾಗಿದೆ.
ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಮ ಮತ್ತು ಉಪ-ನಿರೀಕ್ಷಕ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪಂಜಿಮೊಗರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ನಗರದ ಪಂಜಿಮೊಗರು ವಿವೇಕನಗರದಲ್ಲಿ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಂಜಿಮೊಗರು ನಿವಾಸಿ ಸನತ್ ರಾವ್(22) ಬಂಧಿತ ಆರೋಪಿ.
ಆರೋಪಿಯಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿದ್ದು, ವಶಪಡಿಸಿದ ಎಲ್ಲ ಸೊತ್ತುಗಳ ಒಟ್ಟು ಮೌಲ್ಯ 35,250 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...