ಮ0ಗಳೂರು ಜೂನ್ 21 - ಅಂತರರಾಷ್ಟ್ರೀಯ ಯೋಗ ದಿನಾಚರಣೆ

Source: so news | By MV Bhatkal | Published on 19th June 2018, 9:09 PM | Coastal News |

ಮ0ಗಳೂರು:- ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು.
 ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿದೆಡೆ 5000ಕ್ಕಿಂತಲೂ ಹೆಚ್ಚು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡಲಾಗಿದೆ.
 ಸ್ವಚ್ಛ ಮನಸ್ಸು ಹಾಗೂ ಸ್ವಸ್ಥ ಶರೀರಕ್ಕಾಗಿ ವಿಶ್ವದಾದ್ಯಂತ ಭಾರತೀಯ ಜೀವನ ಪದ್ಧತಿಯಾದ ಯೋಗ ಜನಪ್ರಿಯವಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಂದು ಬೆಳಿಗ್ಗೆ 8 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಜಿಲ್ಲಾ ಆಯುಷ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...