ಮಂಗಳೂರು: ಭೀತಿ ರಾಜಕೀಯದ ವಿರುದ್ಧ ದೇಶದ ಜನತೆ ಒಗ್ಗಟ್ಟಾಗಬೇಕು : ಎ.ಸಯೀದ್

Source: sdpi | By Arshad Koppa | Published on 26th April 2017, 8:19 AM | Coastal News | Special Report | Don't Miss |

ದೇಶದೆಲ್ಲೆಡೆ ಭೀತಿಯ ರಾಜಕೀಯ ತಾಂಡವ ವಾಡುತ್ತಿದೆ. ಕೆಲವು ಕಾನೂನುಗಳು ಮುಸ್ಲಿಮರು, ಆದಿವಾಸಿಗಳು, ದಲಿತರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಇಂತಹ ವಾತಾವರಣವನ್ನು ಮಟ್ಟ ಹಾಕಲು ದೇಶದ ಶಾಂತಿಪ್ರಿಯ ಪ್ರಜೆಗಳು ಒಗ್ಗಟ್ಟಾಗಬೇಕಾದ ಅನಿವಾರ್ಯತೆ ಇದೆ ಎಂದು ಎಸ್‍ಡಿಪಿಐ ರಾಷ್ಟ್ರಾಧ್ಯಕ್ಷ ಎ.ಸಯೀದ್ ಹೇಳಿದ್ದಾರೆ.


    ಎಸ್‍ಡಿಪಿಐ ವತಿಯಿಂದ ಉಳ್ಳಾಲ ಹಝ್ರತ್ ಶಾಲಾ ಮೈದಾನದ ವೀರ ರಾಣ  ಅಬ್ಬಕ್ಕ ವೇದಿಕೆಯಲ್ಲಿ ಎಪ್ರಿಲ್ 24 ಸೋಮವಾರ ದಂದು ಆಯೋಜಿಸಲಾಗಿದ್ದ “ಭೀತಿ ರಾಜಕೀಯದ ವಿರುದ್ಧ ಐಕ್ಯಗೊಳ್ಳೋಣ” ಅಭಿಯಾನದ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
    ಕೋಮುವಾದಿ ಪಡೆಗಳು ಪ್ರಗತಿಪರ ಚಿಂತಕರನ್ನು, ಮಾನವಹಕ್ಕು ಹೋರಾಟಗಾರರನ್ನು ಹಿಂಸಿಸುತ್ತಿದೆ. ಪ್ರಗತಿಪರ ಚಿಂತಕರಾದ ಗೋವಿಂದ ಪನ್ಸಾರೆ, ದಾಮೋದರ ದಾಬೋಲ್ಕರ್, ಎಂ.ಎಂ. ಕಲ್ಬುರ್ಗಿಯವರನ್ನು ಕ್ರೂರವಾಗಿ, ವ್ಯವಸ್ಥಿತ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಪೊಲೀಸ್ ದೌರ್ಜನ್ಯವೂ ವ್ಯಾಪಕವಾಗಿ ನಡೆಯುತ್ತಿದೆ. ದೇಶವನ್ನೇ ಅಭದ್ರತೆಗೆ ತಂದಿತ್ತಿರುವ ಅದೆಷ್ಟೋ ಪ್ರಕರಣಗಳು ಇದ್ದರೂ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಬೇಕಿದ್ದ ಜಾತ್ಯಾತೀತ ಪಕ್ಷಗಳು ಮೌನವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.


    ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ ವಿಶೇಷವಾಗಿ ಅಲ್ಪಸಂಖ್ಯಾತರ, ದಲಿತರ, ಆದಿವಾಸಿಗಳ ಮನದಲ್ಲಿ ಭೀತಿ ಹಾಗೂ ಅಭದ್ರತೆ ಹೆಚ್ಚಿದೆ. ಹತ್ಯೆ, ಪ್ರತೀಕಾರ, ಕೊಲೆ, ದ್ವಂಸ, ಸಾಮರಸ್ಯ, ಕದಡುವಂತಹ ಕಾರ್ಯಗಳು ಕಾನೂನಿನ ಯಾವುದೇ ಭಯವಿಲ್ಲದೆ ಸಾಗುತ್ತಿದೆ. ಅಷ್ಟಕ್ಕೂ ದುಷ್ಕರ್ಮಿಗಳ ಅಟ್ಟಹಾಸ ತಾರಕಕ್ಕೆ ಏರಿದ್ದರೂ ಕೇಂದ್ರ ಸರಕಾರ ಮೌನ ವಹಿಸಿರುವುದು ದುಷ್ಕರ್ಮಿಗಳಿಗೆ ಹೆಚ್ಚಿನ ಬಲ ತಂದಿದೆ. 
    ಬಿಜೆಪಿ ಸರಕಾರದ ಭೃಷ್ಟ ಹಗೂ ತಾರತಮ್ಯ ನೀತಿ ಮತ್ತು ಆಡಳಿತದ ಬಗ್ಗೆ ಪ್ರಶ್ನಿಸಿದರೆ ರಾಷ್ಟ್ರನಿಂದನೆ ಕೇಸು ದಾಖಲಿಸಿ ಜೈಲಿಗೆ ಅಟ್ಟುವ ಕೆಲಸ ಮಾಡಲಾಗುತ್ತಿದೆ. ತಮ್ಮ ಹಕ್ಕುಗಳಿಗೆ ಹೋರಾಟ ಮಾಡುವವರನ್ನು ದೇಶ ದ್ರೋಹಿಗಳು ಹಾಗೂ ದೇಶ ವಿರೋಧಿಗಳು ಎಂದು ಬಿಂಬಿಸಿ ಸಮಾಜದಿಂದ ದೂರವಿಡುವ ಕೆಲಸ ಮಾಡುತ್ತಿದೆ. ಮೋದಿ ಸಂಘ ಪ್ರಾಯೋಜಿತ ಮಾಧ್ಯಮ ಗುಂಪುಗಳು ಕಪೋಲ ಕಲ್ಪಿತ ಸುದ್ದಿಗಳಿಗೆ ಹೆಚ್ಚಿನ ರಂಜನೆ ಕೊಡುತ್ತಿದ್ದು ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು.
    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಹನೀಫ್‍ಖಾನ್ ಕೊಡಾಜೆಯವರು ವಹಿಸಿದರು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎ. ಸಯೀದ್‍ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎಸ್‍ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್, ರಾಜ್ಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸೋ ಫ್ರಾಂಕೋ ಹಾಗೂ ಅಕ್ರಂ ಹಸನ್‍ರವರು ಕಾರ್ಯಕ್ರವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಎಸ್‍ಡಿಟಿಯು ರಾಜ್ಯಾಧ್ಯಕ್ಷರಾದ ಜಲೀಲ್ ಕೃಷ್ಣಾಪುರ, ಎಸ್‍ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಎಂ. ಕೂಸಪ್ಪ, ಅಡ್ವಕೇಟ್ ಮಜೀದ್ ಖಾನ್, ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದೀಕ್ ಪುತ್ತೂರು, ಎಸ್‍ಡಿಪಿಐ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕಿನ್ಯ, ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ, ಮಂಗಳೂರು ಕಾರ್ಪೋರೇಟರ್ ಅಯಾಝ್ ಕೃಷ್ಣಾಪುರ, ಎಸ್‍ಡಿಪಿಐ ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಐಎಮ್‍ಆರ್, ಎಸ್‍ಡಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸೀಫ್ ಕೋಟೇಶ್ವರ, ಎಸ್‍ಡಿಪಿಐ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾರ್ಯದರ್ಶಿ ಹಾರಿಸ್ ಮಲಾರ್, ಎಸ್‍ಡಿಪಿಐ ಉಳ್ಳಾಲ ನಗರ ಸಮೀತಿ ಅಧ್ಯಕ್ಷ ಎ.ಆರ್. ಅಬ್ಬಾಸ್, ಎಸ್‍ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಚ್. ಶಾಹುಲ್, ಎಸ್‍ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ನೂರುಲ್ಲಾ ಕುಳಾಯಿ, ಎಸ್‍ಡಿಪಿಐ ಪುತ್ತೂರು ವಿಧಾನ ಸಭಾಕ್ಷೇತ್ರದ ಅಧ್ಯಕ್ಷ ಹಮೀದ್ ಮೆಜೆಸ್ಟಿಕ್, ಎಸ್‍ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಉಮ್ಮರ್ ಸುಳ್ಯ, ಎಸ್‍ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ನವಾಝ್ ಬೆಳ್ತಂಗಡಿ, ಎಸ್‍ಡಿಪಿಐ ಮುಲ್ಕಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಜಮಾಲ್ ಜೋಕಟ್ಟೆ, ಎಸ್‍ಡಿಪಿಐ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಮುನೀಬ್ ಬೆಂಗ್ರೆ, ಇಂಡಿಯನ್ ಸೋಶಿಯಲ್ ಫೋರಂ ದಮಾಮ್ ಘಟಕ ಅಧ್ಯಕ್ಷ ಆರಿಫ್ ಜೋಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್‍ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ವಂಧಿಸಿ, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮತ್ತು ಝಾಹಿದ್ ಮಲಾರ್ ಕಾರ್ಯಕ್ರಮವನ್ನು ನಿರೂಪಿಸಿದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...