ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಯುವ ಸಮ್ಮೇಳನ, ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ

Source: shabbir | By Arshad Koppa | Published on 24th May 2017, 9:06 AM | State News |

ಕೋಲಾರ, ಮೇ 23 :    2015-16ನೇ ಸಾಲಿನ ರಾಜ್ಯ ಮಟ್ಟದ ಯುವ ಸಮ್ಮೇಳನ, ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮವನ್ನು ದಿನಾಂಕ 28-5-2017 ರಿಂದ 30-5-2017ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಲಿದೆ.  ಈ ಕಾರ್ಯಕ್ರಮಕ್ಕೆ 16-40 ವರ್ಷ ವಯೋಮಿತಿಯುಳ್ಳ ಯುವ ಪ್ರತಿನಿಧಿಗಳು, ಕಲಾವಿದರುಗಳು, ಎನ್.ಎಸ್.ಎಸ್. ಯುವಕ:ಯುವತಿಯರು ಭಾಗವಹಿಸಬಹುದಾಗಿದೆ.    ಭಾಗವಹಿಸುವ ಎಲ್ಲಾ ಯುವಜನರಿಗೆ ಸಾಮಾನ್ಯ ವಸತಿ, ಪ್ರಯಾಣಭತ್ಯೆ ಮತ್ತು ಊಟೋಪಹಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಮಾಡಿರುತ್ತಾರೆ.  
    ಆಸಕ್ತ ಯುವಕ:ಯುವತಿಯರು ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೋಲಾರ ಈ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು,  ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 25-05-2017ರೊಳಗೆ ಸಲ್ಲಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 

ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಕೋಲಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2017-2018ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಕೋಲಾರ ಜಿಲ್ಲೆಯಲ್ಲಿ ಇರುವ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಯೊಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಕಲಾವಿದರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಒಟ್ಟು ಹತ್ತು (10) ಜನ ಕಲಾವಿದರು ಕಡ್ಡಾಯವಾಗಿ ಕೋಲಾರ ಜಿಲ್ಲೆಯವರಾಗಿರಬೇಕು.  ಇದರಲ್ಲಿ 08 ಜನ ಕಲಾವಿದರು ತಂಡದಲ್ಲಿ ಕಡ್ಡಾಯವಾಗಿ ಇರಬೇಕು ಉಳಿದ ಇಬ್ಬರು ಬದಲಿ ಕಲಾವಿದರಾಗಿ ಇರಬೇಕು.
ಬೀದಿನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ಮತ್ತು ಪಾನ್‍ಕಾರ್ಡ್ ಹಾಗೂ ಎಂಟು ಜನ ಕಲಾವಿದರ ಬ್ಯಾಂಕ್ ಖಾತೆ ಮತ್ತು ಪಾನ್‍ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.  ತಂಡವು ನೊಂದಾಯಿಸಿದ ನೋಂದಣ  ಪ್ರತಿ ಮತ್ತು ಕಳೆದ ಮೂರು ವರ್ಷದ ಆಡಿಟ್ ಪ್ರತಿ ಹಾಗೂ 10 ಜನ ಸದಸ್ಯರನ್ನೊಳಗೊಂಡ 4*6 ಅಳತೆಯ 2 ಭಾವಚಿತ್ರ ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯ.
ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗು ಕಾರ್ಯಕ್ರಮಗಳನ್ನು  ಬೀದಿನಾಟಕ ಕಲಾ ತಂಡಗಳು ತಮ್ಮ ಕಲೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಅರಿವು ಮುಟ್ಟಿಸಬೇಕಾಗುತ್ತದೆ.  ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳ ಮುಖ್ಯಸ್ಥರು ಕೋಲಾರ ವಾರ್ತಾ ಮತ್ತು ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, 2017ರ ಮೇ 25 ರೊಳಗಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಬೀದಿ ನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿ ಮತ್ತು ಪಾನ್‍ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಎಂಟು ಜನ ಕಲಾವಿದರ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ ಮತ್ತು ಪಾನ್‍ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.  ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ದಾಖಲೆಗಳು ಅಪೂರ್ಣವಾಗಿರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.   ಸರಿಯಾದ ದಾಖಲೆಗಳನ್ನು ನೀಡಿದ ತಂಡಗಳಿಗೆ ಮಾತ್ರ ಸಂದರ್ಶನ ಪತ್ರ ಕಳುಹಿಸಲಾಗುವುದು.  ಆ ತಂಡಗಳು ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ.
ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು.  ಆಯ್ಕೆ ಪ್ರಕ್ರಿಯೆಯು ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆಯಲಿದ್ದು,  ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಜಿಲ್ಲಾಧಿಕಾರಿಗಳ ಕಛೇರಿ ಆವರಣ,  ಕೋಲಾರ ಹಾಗೂ ದೂರವಾಣ  ಸಂಖ್ಯೆ 08152-222077 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...