ಜಾತಿ ಧರ್ಮಗಳ ನಡುವೆ ವಿಷಬೀಜ ಬಿತ್ತಿ”ಸಬ್ ಕಾ ವಿನಾಶ್’ ಮಾಡುತ್ತಿರುವ ಮೋದಿ-ಸಿದ್ಧರಾಮಯ್ಯ ಟೀಕೆ

Source: sonews | By Staff Correspondent | Published on 21st March 2018, 12:05 AM | Coastal News | State News | Don't Miss |

ಮಂಗಳೂರು: ನಮ್ಮದು ಸಾಮಾಜಿಕ ನ್ಯಾಯದ ಪರವಾದ ಸರಕಾರ ,ಬಿಜೆಪಿ ಅದಕ್ಕೆ ವಿರುದ್ಧವಾದ ಪಕ್ಷ ಜಾತಿ,ಧರ್ಮದ ವಿಷ ಬೀಜ ಬಿತ್ತಿ ಜನರನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅವರು ನಗರದಲ್ಲಿ ಜನಾಶೀರ್ವಾದ ಯಾತ್ರೆಯನ್ನು ಮುಗಿಸಿ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಜನಾಶೀರ್ವಾದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಕರ್ನಾಟಕ ಸರಕಾರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಜಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಟ್ಟಿದೆ. ಆದರೆ ಕೇಂದ್ರ ಸರಕಾರ ವಾಗಲೇ ದೇಶದ ಇತರ ಕಡೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರಗಳು ಈ ರೀತಿಯ ಯಾವ ಕ್ರಮವನ್ನು ಕೈ ಗೊಂಡಿಲ್ಲ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಮಾಕ್ ಹಾಗೂ ಶೆಡ್ಯೂಲ್ಡ್ ಬ್ಯಾಂಕ್‌ಗಳ ರೈತರ ಸಾಲಮನ್ನಾ ಮಾಡಲು ಮುಂದಾಗಲಿಲ್ಲ.ರೈತರ ಸಾಲ ಮನ್ನಾ ಮಾಡಲು ಮಂದಾಗಲಿಲ್ಲ ಎಂದರು.

ನಮ್ಮದು ನುಡಿದಂತೆ ನಡೆದ ಸರಕಾರ. ಹಿಂದು-ಮುಸ್ಲಿಂ ನಡುವೆ ಕೋಮು ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಎನ್ನುವ ನೈತಿಕ ಹಕ್ಕಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
    

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...