ಪ್ರಧಾನಿಯಿಂದ ೧೨ಲಕ್ಷ ರೂಪೆ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Source: sonews | By sub editor | Published on 29th October 2017, 9:55 PM | Coastal News | State News | National News | Don't Miss |

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೃಹತ್‌ ಕಾರ್ಯಕ್ರಮದಲ್ಲಿ ಇಂದು ಮಧ್ಯಾಹ್ನ ಪಾಲ್ಗೊಂಡು 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರೂಪೇ ಕಾರ್ಡ್  ವಿತರಿಸುವ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಇಬ್ಬರು ಮಹಿಳೆಯರಿಗೆ ಸಾಂಕೇತಿಕವಾಗಿ ರುಪೇ ಕಾರ್ಡ್ ವಿತರಿಸಿದರು.

 

“ನಮೋ ಮಂಜುನಾಥ .... ಧರ್ಮಸ್ಥಳದ ಬಂಧು ಭಗಿನೀಯರೇ  ನಿಮಗೆಲ್ಲರಿಗೂ ನನ್ನ ನಮಸ್ಕಾರ "ಎಂದು ಕನ್ನಡದಲ್ಲಿ ಭಾಷಣ  ಆರಂಭಿಸಿದ ಪ್ರಧಾನಿ ಮೋದಿ  "ಮಂಜುನಾಥ ಸ್ವಾಮಿ  ದರ್ಶನ ಪಡೆಯುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ "ಎಂದು ಬಣ್ಣಿಸಿದರು.

"ಕಳೆದ ವಾರ ಆಧಿಶಂಕರರು ಸ್ಥಾಪಿಸಿದ್ದ ಕೇದರನಾಥ್ ದರ್ಶನ ಪಡೆದಿದ್ದೆ. ಇಂದು ದಕ್ಷಿಣದ ಮಂಜುನಾಥನ ದರ್ಶನದ ಅವಕಾಶ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟರು.

“ನನ್ನಂತ ಸಾಮಾನ್ಯ ವ್ಯಕ್ತಿಗೆ ನೀವು ಸನ್ಮಾನ ಮಾಡಿದ್ದೀರಿ.ನಿಮ್ಮಂತಹ ಮಹಾನ್ ತಪಸ್ವಿಯ  ಮುಂದೆ ನಾನು ಚಿಕ್ಕವನು. ನಿಮ್ಮ ಸಾಧನೆ ನಮಗೆಲ್ಲರಿಗೂ ಪ್ರೇರಣೆ ವಿಷಯ  "ಎಂದು ಡಾ.ಹೆಗ್ಗಡೆ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

"ಕೇಂದ್ರದ ಕೌಶಲ್ಯಾಭಿವದ್ಧಿ ಕಾರ್ಯಕ್ರಮಕ್ಕೆ ಹೆಗ್ಗಡೆಯವರೇ ಪ್ರೇರಣೆಯಾಗಿದ್ದಾರೆ. ಅವರ ತತ್ವವನ್ನೇ ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿ ಅಳವಡಿಸಲಾಗಿದೆ. ಅವರು ಸಣ್ಣ ವಯಸ್ಸಿನಿಂದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.  50 ವರ್ಷಗಳಿಂದ ಸಮಾಜದ ಹಿತಕ್ಕಾಗಿ ಕೆಲಸ ಮಾಡುವ ಅವರ ಸಾಧನೆ ದೊಡ್ಡದು" ಎಂದು ಹೇಳಿದರು.

ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ಮೋದಿಗೆ ಪೈಸೂರು ಪೇಟಾ ತೊಡಿಸಿ, ಸರಸ್ವತಿಯ ವಿಗ್ರಹ ನೀಡಿ ಸಾಂಪ್ರದಾಯಿಕವಾಗಿ ಗೌರವಿಸಿದರು.  ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು. ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸನ್ಮಾನಿಸಿದರು.

 ಕಂಬಳದ ನೊಗದ ಮಾದರಿ ಉಡುಗೊರೆಯನ್ನು ಸಂಸದ ನಳಿನಿ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಸಮರ್ಪಣೆ ಮಾಡಿದರು.

ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಮತ್ತು  ಅನಂತ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,  ಶಾಸಕ ವಸಂತ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಾಸ್ತಾವಿಕ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ ಸ್ವಾಗತಿಸಿದರು. ಡಾ.ಯಶೋವರ್ಮ ಕಾರ್ಯಕ್ರಮ ನಿರೂಪಿಸಿದರು.

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...