ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶೇ.೧೧ ಮತದಾರರ ಹೆಚ್ಚಳ-ಜಿಲ್ಲಾಧಿಕಾರಿ

Source: sonews | By Staff Correspondent | Published on 27th March 2018, 4:01 PM | Coastal News | State News | Don't Miss |

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

ದ.ಕ ಜಿಲ್ಲೆಯಲ್ಲಿ ಒಟ್ಟು 16,67,194 ಮತದಾರರು ನೋಂದಣಿಯಾಗಿದ್ದು, ಇವರಲ್ಲಿ 8,46,030 ಮಹಿಳೆಯರು ಮತ್ತು 8,21,123 ಪುರುಷ ಮತದಾರರಾಗಿದ್ದಾರೆ. 2013ರ ಚುನಾವಣೆಯಲ್ಲಿ ಒಟ್ಟು ಮತದಾರರ ಸಂಖ್ಯೆ 15,01,024 ಮತದಾರರಿದ್ದು, ಈ ಬಾರಿ ಶೇ. 11ರಷ್ಟು ಮತದಾರರ ಸಂಖ್ಯೆ ಹೆಚ್ಚವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ಬಾರಿ ಚುನಾವಣೆಯಲ್ಲಿ 1766 ಮತಗಟ್ಟೆಗಳು ಕಾರ್ಯ ನಿರ್ವಹಿಸಿದ್ದು, ಈ ಬಾರಿ 1858 ಮತಗಟ್ಟೆಗಳನ್ನು ಗುರುತಿಸಲಾಗಿದೆ. (ಇದರಲ್ಲಿ 1790 ಸಾಮಾನ್ಯ ಮತಗಟ್ಟೆಗಳಾಗಿದ್ದು, 68 ಪೂರಕ ಮತಗಟ್ಟೆಗಳಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ 1300ಕ್ಕಿಂತ ಅಧಿಕ ಹಾಗೂ ನಗರ ಪ್ರದೇಶಗಳಲ್ಲಿ 1400ಕ್ಕಿಂತ ಅಧಿಕ ಮತದಾರರನ್ನು ಹೊಂದಿರುವ ಕಡೆ ಈ ಪೂರಕ ಮತಗಟ್ಟೆಗಳನ್ನು ಗುರುತಿಸಲಾಗಿದೆ). ಇದರೊಂದಿಗೆ ಸಾರ್ವಜನಿಕರ ಹಿತಾಸಕ್ತಿಯ ಮೇರೆಗೆ ಈ ಬಾರಿ ಹಳೆಯ 36 ಮತಗಟ್ಟೆಗಳನ್ನು ಹೊಸತಾಗಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಚುನಾವಣೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತವು ಪ್ರಥಮ ಹಂತದ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರೈಸಿದೆ. 1858 ಮತಗಟ್ಟೆಗಳಲ್ಲಿ 2787 ಬ್ಯಾಲೆಟ್ ಯುನಿಟ್ ಹಾಗೂ 27 ಕಂಟ್ರೋಲ್ ಯುನಿಟ್‌ಗಳು, 2450 ವಿವಿ ಪ್ಯಾಟ್‌ಗಳನ್ನು ಅಳವಡಿಸಲಾಗಿದೆ. ಈಗಾಗಲೇ ಇಲೆಕ್ಟ್ರಾನಿಕ್ ಮತಯಂತ್ರಗಳು ಆಗಮಿಸಿದ್ದು, ಅವುಗಳ ಪರಿಶೀಲನೆ ನಡೆಸಲಾಗಿದೆ. ವಿವಿ ಪ್ಯಾಟ್ ಮೆಶಿನ್‌ನಿಂದಾಗಿ ಮತದಾರರು ತಾವು ಇಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಚಲಾಯಿಸಿದ ಮತ ಅರ್ಹ ಅಭ್ಯರ್ಥಿಗೆ ಚಲಾವಣೆಯಾಗಿದೆಯೇ ಎಂಬುದನ್ನು ಪೇಪರ್ ಫಾರ್ಮ್ಯಾಟ್‌ನಲ್ಲಿ ಪರಿಶೀಲಿಸುವ ತಂತ್ರವಾಗಿದೆ. ಪ್ರತಿಯೊಂದು ಮತಗಟ್ಟೆಯಲ್ಲಿಯೂ ಈ ವಿವಿ ಪ್ಯಾಟ್ ಯಂತ್ರವನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಮತದಾನದಲ್ಲಿ ಯಾವುದೇ ರೀತಿಯ ತೊಂದರೆ, ಅಕ್ರಮಗಳಾಗಲು ಸಾಧ್ಯವಾಗುವುದಿಲ್ಲ. ಮತದಾರರು ಮತ ಚಲಾವಣೆಯ ತಕ್ಷಣ ವಿವಿ ಪ್ಯಾಟ್‌ನ್ನು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರಬಹುದು. ಪ್ರತಿಯೊಂದು ಕ್ಷೇತ್ರದಲ್ಲೂ ಒಂದು ಮಹಿಳಾ ಮತಗಟ್ಟೆಗಳಿರುತ್ತದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.

24 ಗಂಟೆಗಳಲ್ಲಿ ಸರಕಾರಿ ಆಸ್ತಿಗಳಲ್ಲಿನ ಜಾಹೀರಾತು ತೆರವು !

ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಸರಕಾರಿ ಆಸ್ತಿಗಳಲ್ಲಿ ಹಾಕಲಾಗಿರುವ ಅನಧಿಕೃತ ಜಾಹೀರಾತುಗಳನ್ನು 24 ಗಂಟೆಯೊಳಗೆ, ಸಾರ್ವಜನಿಕ ಪ್ರದೇಶಗಳಲ್ಲಿ 48 ಗಂಟೆಯೊಳಗೆ ಹಾಗೂ ಇತರ ಅನಧಿಕೃತ ಜಾಹೀರಾತುಗಳನ್ನು ಮೂರ್ನಾಲು ದಿನಗಳಲ್ಲಿ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಗೋಷ್ಠಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.

ಬಂಟ್ವಾಳ, ಮಂಗಳೂರು ಉತ್ತರ ಖರ್ಚು ಸೂಕ್ಷ್ಮ ಸಾಧ್ಯತಾ ಕ್ಷೇತ್ರಗಳು !

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಂಟ್ವಾಳ ಮತ್ತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರವನ್ನು ಖರ್ಚು ಸೂಕ್ಷ್ಮ ಸಾಧ್ಯತೆಯ ಕ್ಷೇತ್ರಗಳಾಗಿ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

ವಿಕಲಚೇತನರಿಗೆ ಮತದಾನ ಸೌಲಭ್ಯಕ್ಕೆ ವ್ಯವಸ್ಥೆ

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತಗಟ್ಟೆಗಳಲ್ಲಿ ದೈಹಿಕ ವಿಕಲಚೇತನರಿಗೆ ಮತದಾನಕ್ಕೆ ಸೂಕ್ತ ಸೌಕರ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಮಾತ್ರವಲ್ಲದೆ ಪ್ರಚಾರವನ್ನು ಪರಿಸರ ಸ್ನೇಹಿಯಾಗಿಸಲು ಆಯೋಗ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದು.

ಚುನಾವಣಾ ಕಂಟ್ರೋಲ್ ರೂಂ ಸಂಖ್ಯೆ
ಚುನಾವಣೆಗೆ ಸಂಬಂಧಿಸಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ನಂಬರ್ 1800 4252099 ಅಥವಾ 0824 2420002.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...