ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗೀಶನ ಸಹಚರನ ಸೆರೆ

Source: sonews | By Staff Correspondent | Published on 15th March 2018, 12:01 AM | Coastal News | Don't Miss |

ಇತ್ತೀಚೆಗೆ ಮಂಗಳೂರು ನಗರದಲ್ಲಿ ನಡೆದ ಸರಣೆ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದಲ್ಲಿ ಇತ್ತೀಚೆಗೆ ಭೂಗತ ಪಾತಕಿ ಕಲಿ ಯೋಗೀಶ ಎಂಬಾತನು ತನ್ನ ಸಹಚರರಿಂದ ನಡೆಸಿದ ಸರಣಿ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ಆತನ ಸಹಚರರ ಪತ್ತೆ ಕಾರ್ಯ ಮುಂದುವರಿಸಿದ ಮಂಗಳೂರು ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶಾಂತರಾಮ್ ರವರ ನೇತ್ರತ್ವದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯಾದ

1. ಮೊಹಮ್ಮದ್ ಹನೀಫ್ @ ಮೊಹಮ್ಮದ್ ಆಲಿ @ ಮುನ್ನಾ, ಪ್ರಾಯ(35), ತಂದೆ: ಹಸೈನಾರ್, ವಾಸ: ದೇರಾ ಹೌಸ್, ಕುರುಡಪದವು ಅಂಚೆ, ಪೈವಳಿಕೆ ಗ್ರಾಮ, ಸುಂಕದಕಟ್ಟೆ, ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಈತನು ಹಿಂದೆ 2017 ನೇ ಡಿಸೆಂಬರ್ ತಿಂಗಳಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ ಸ್ಟ್ರೀಟ್ ಸಂಜೀವ ಶೆಟ್ಟಿ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಈತನು ಹಿಂದೆ ಕಲಿ ಯೋಗೀಶನ ಜೊತೆ ನೇರ ಸಂಪರ್ಕದಲ್ಲಿದ್ದು, ಈತನ ವಿರುದ್ದ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಬೆದರಿಕೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಫ್ತಾ ಹಣಕ್ಕಾಗಿ ಕೊಲೆ ಯತ್ನ ಪ್ರಕರಣ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹೀಗೆ ಈತನು ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

ಈತನು ನ್ಯಾಯಾಲಯದಿಂದ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಹೊರಡಿಸಿರುತ್ತದೆ. ಈತನು ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ಬಳಿಕ 2017 ಇಸವಿಯಲ್ಲಿ ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಫ್ತಾ ಹಣಕ್ಕಾಗಿ ಬೆದರಿಕೆಯೊಡ್ಡಿದ್ದ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕೇರಳ ರಾಜ್ಯದಲ್ಲಿ ಈತನ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಈತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ವಾರಂಟ್ ಹೊರಡಿಸಿರುವ ಬಗ್ಗೆ ತಿಳಿದುಬಂದಿರುತ್ತದೆ.

ಆರೋಪಿಯ ಪತ್ತೆ ಕಾರ್ಯದಲ್ಲಿ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ಶಾಂತಾರಾಮ್, ಪಿಎಸ್ಐ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...