ಮಂಗಳೂರು:ಪಿ.ಎ.ತಾಂತ್ರಿಕ ಮಹಾ ವಿದ್ಯಾಲಯ ವಾರ್ಷಿಕೋತ್ಸವ

Source: so english | By Arshad Koppa | Published on 28th May 2017, 3:39 PM | Coastal News | State News | Special Report |

ಪಿ.ಎ. ತಾಂತ್ರಿಕ ಮಹಾವಿದ್ಯಾಲಯ ಇದರ 17ನೇ ವಾರ್ಷಿಕೋತ್ಸವ ಮೇ 22, 2017ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಯೇನೆಪೋಯ ಯುನಿವರ್ಸಿಟಿ ರಿಜಿಸ್ಟ್ರಾರ್ ಆದ ಡಾ|| ಜಿ. ಶ್ರೀಕುಮಾರ್ ಮೆನನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅವರು ಇಂಜಿನಿಯರಿಂಗ್ ಕೋರ್ಸುಗಳನ್ನು ಆಯ್ಕೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಹೊಸ ಹೊಸ ತಂತ್ರಜ್ಞಾನಗಳ ಆವಿಶ್ಕಾರ ಮಾಡುವತ್ತ ಗಮನ ಹರಿಸಬೇಕು. ಇದನ್ನು ಸಾದಿಸಲು ತಮ್ಮನ್ನು ತಾವೇ ತೊಡಗಿಸಿಕೊಂಡು ಕಾರ್ಯ ಪ್ರವೃತ್ತರಾದರೆ ಸಾಕು, ಯಶಸ್ಸು ಖಂಡಿತ ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಇಂಜಿನಿಯರಿಂಗ್ ಮತ್ತು ಎಂ.ಬಿ.ಎ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯಗಳನ್ನು ನೀಡಿ ಗೌರವಿಸಲಾಯಿತು ಮತ್ತು ಶಿಕ್ಷಣೇತರ, ಕಾಲೇಜು ಮತ್ತು ಅಂತರ್ ಕಾಲೇಜು ಕ್ರೀಡಾಕೂಟ ಮತ್ತು ವಿವಿಧ ಸಂಘಟನೆ ಚಟುವಟಿಕೆಯಲ್ಲಿ ಭಾಗವಹಿಸಿ ಸಾಧನೆಗೈದ ಸುಮಾರು 150 ವಿದ್ಯಾರ್ಥಿಗಳನ್ನು ಕೂಡಾ ಪುರಸ್ಕರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ|| ಅಬ್ದುಲ್ ಶರೀಫ್ 2016-17ನೇ ಸಾಲಿನ ವಾರ್ಷಿಕ ವರದಿಯನ್ನು ಸಲ್ಲಿಸಿದರು. ಪಿ.ಎ. ಎಜುಕೇಶನ್ ಟ್ರಸ್ಟಿನ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ಲಾ ಇಬ್ರಾಹಿಂರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಡಾ|| ಆಂಟನಿ ಎ.ಜೆ. ವಿದ್ಯಾರ್ಥಿ ಕ್ಷೇಮಪಾಲಕರು ಅತಿಥಿಗಳನ್ನು ಪರಿಚಯಿಸಿದರು. ಕಾಲೇಜಿನ ಶೈಕ್ಷಣ ಕ ನಿರ್ದೇಶಕ ಪ್ರೊ.ಸರ್ಫ್‍ರಾಝ್ ಹಾಸಿಂ ಜೆ. ಇವರು ಸ್ವಾಗತಿಸಿ, ಉಪಪ್ರಾಂಶುಪಾಲರಾದ ಡಾ| ರಮೀಝ್ ರವರು ವಂದಿಸಿದರು.
ಸಭೆಯಲ್ಲಿ ಶ್ರಿಯುತ ಕೆ.ಎಮ್ ಹನೀಫ್ ಆಡಳಿತಾಧಿಕಾರಿಗಳು, ಡಾ| ಝಾಯಿದ್ ಅನ್ಸಾರಿ ಮುಖ್ಯಸ್ಥರು, ಸಂಶೋಧನಾ ವಿಭಾಗ, ಡಾ|| ಬೀರಾನ್ ಮೊಯ್ದಿನ್ ನಿರ್ದೇಶಕರು ಎಂ.ಬಿಎ ವಿಭಾಗ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.
ಪ್ರೊ.ನಬೀಲ್ ಅಹಮದ್ ಪ್ರತಿಭಾಂತ ವಿದ್ಯಾರ್ಥಿಗಳ ಪಟ್ಟಿಯನ್ನು ಓದಿದರು. ಮೆಕ್ಯಾನಿಕಲ್ ವಿದ್ಯಾರ್ಥಿ ಆದಿಲ್‍ರವರು ಕಿರಾಹತ್ ಪಠಿಸಿ, ವಿದ್ಯಾರ್ಥಿಗಳಾದ ಅಬ್ದುಲ್ ಅಹದ್ ಷೇಕ್ ಮತ್ತು ಅಕ್ಷತ ಕಾರ್ಯಕ್ರಮವನ್ನು ನಿರೂಪಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...