ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಗೋಲ್ಮಾಲ್: ಮರುಚುನಾವಣೆಗೆ ಮಾಯವತಿ ಆಗ್ರಹ  

Source: S O News service | By Staff Correspondent | Published on 11th March 2017, 3:49 PM | National News | Don't Miss |

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಹೀನಾಯ ಸೋಲನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು, ಮತಯಂತ್ರಗಳಲ್ಲಿ ಬಿಜೆಪಿಯ ಕೈವಾಡವಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಮತಪತ್ರಗಳ ಮೂಲಕ ಹೊಸದಾಗಿ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗವನ್ನು ಅವರು ಆಗ್ರಹಿಸಿದ್ದಾರೆ. ಶನಿವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಭಾರೀ ಗೆಲುವಿನೊಂದಿಗೆ ಸರಕಾರ ರಚಿಸಲು ಸಜ್ಜಾಗಿದೆ.

ಮತದಾನವನ್ನು ತಿರುಚಲಾಗಿದೆ ಮತ್ತು ಬಿಜೆಪಿ ಕಾರ್ಯಕರ್ತರು ಮತದಾನ ಯಂತ್ರಗಳಲ್ಲಿ ಕೈವಾಡ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಹೊಸದಾಗಿ ಚುನಾವಣೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

 ಈ ಚುನಾವಣಾ ಫಲಿತಾಂಶಗಳು ಅಚ್ಚರಿಯನ್ನು ಮೂಡಿಸಿವೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಜನರಲ್ಲಿದ್ದ ವಿಶ್ವಾಸಕ್ಕೆ ಭಂಗವುಂಟಾಗಿದೆ. ಜನರಲ್ಲಿ ಇನ್ನು ಈ ವಿಶ್ವಾಸವುಳಿದಿಲ್ಲ. ಇದು ಪ್ರಜಾಫ್ರಭುತ್ವದ ಮೇಲಿನ ದಾಳಿಯಾಗಿದೆ. ಬಿಜೆಪಿಗೆ ಜನರು ಮತಗಳನ್ನೇ ಹಾಕಿರದ ಪ್ರದೇಶಗಳಲ್ಲಿಯೂ ಅದು ಗೆಲುವು ಸಾಧಿಸಿದೆ ಎಂದು ತನ್ನ ಮೂಲಗಳು ವರದಿ ಮಾಡಿವೆ ಎಂದರು.

ಮುಸ್ಲಿಮ್ ಪ್ರಾಬಲ್ಯದ ಪ್ರದೇಶಗಳಲ್ಲಿಯೂ ಬಿಜೆಪಿ ಗೆದ್ದಿರುವುದು ಮತಯಂತ್ರಗಳಲ್ಲಿ ದೋಷವಿತ್ತು ಎನ್ನುವುದನ್ನು ಬೆಟ್ಟುಮಾಡುತ್ತಿದೆ ಎಂದು ಒತ್ತಿ ಹೇಳಿದ ಮಾಯಾವತಿ ಅವರು, ಒಂದೇ ಮತಯಂತ್ರಗಳು ಬಿಜೆಪಿಯೇತರ ಮತಗಳನ್ನು ಸ್ವೀಕರಿಸಿಲ್ಲ ಅಥವಾ ಇತರ ಪಕ್ಷಗಳಿಗೆ ಹಾಕಿದ ಮತಗಳೂ ಬಿಜೆಪಿಗೇ ಹೋಗಿವೆ ಎಂದು ಆರೋಪಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...