ಭಟ್ಕಳ:ಉಚಿತ ಬಸ್ ಪಾಸಗೆ ಆಗ್ರಹಿಸಿ ಎಬಿವಿಪಿಯಿಂದ ಶಾಸಕ ಸುನಿಲ ನಾಯ್ಕಗೆ ಮನವಿ.

Source: so news | By MV Bhatkal | Published on 18th June 2018, 9:27 PM | Coastal News |

ಭಟ್ಕಳ: ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‍ಗಾಗಿ ಆಗ್ರಹಿಸಿದರು ರಾಜ್ಯದ ಎಲ್ಲಾ ಚುನಾಯಿತ ಶಾಸಕರಿಗೆ ಮನವಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಂದು ಭಟ್ಕಳ ಎಬಿವಿಪಿ ವತಿಯಿಂದ ಶಾಸಕ ಸುನಿಲ ನಾಯ್ಕ ಅವರಿಗೆ ಮನವಿಯನ್ನು ಸಲ್ಲಿಸಿದರು. 

ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರದ 2018-19ನೇ ಸಾಲಿನ ವಾರ್ಷಿಕ ಬಜೆಟ್‍ನಲ್ಲಿ ಎಸ್ಸಿ -ಎಸ್ಟಿ ಸೇರಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಆದರೆ ಈಗಿನ ರಾಜ್ಯ ಸರ್ಕಾರ ಯೋಜನೆಯನ್ನು ಜಾರಿಗೊಳಿಸಿದೇ ಕೇವಲ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತವಾಗಿ ಬಸ್ ಪಾಸ್ ನೀಡಿ ಉಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರ ಖಂಡಿಸುತ್ತಿದ್ದೇವೆ.  

ರಾಜ್ಯದ ಪ್ರಸಕ್ತ ವರ್ಷದಲ್ಲಿ ಇಪ್ಪತ್ತ್ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್‍ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಉಚಿತ ಬಸ್ ಪಾಸ್ ವಿತರಣೆಯಿಂದ ರಾಜ್ಯದ ಬೊಕ್ಕಸಕ್ಕೆ ಯಾವುದೇ ರೀತಿ ಹೆಚ್ಚು ಹೊರೆಯಾಗುವುದಿಲ್ಲ ಬದಲಿಗೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಪ್ರೋತ್ಸಾಹ ನೀಡಿದಂತಾಗುತ್ತದೆ. 
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈಗಾಗಲೇ ಉಚಿತ ಬಸ್ ಪಾಸ್‍ಗಾಗಿ ರಾಜ್ಯಾದ್ಯಂತ ಹೋರಾಟವನ್ನು ನಡೆಸಿ ರಾಜ್ಯದ ಶಿಕ್ಷಣ ಹಣಕಾಸು ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ರಾಜ್ಯಾದ್ಯಂತ ಜೂನ್ 7 ರಂದು ಬಸ್ ಪಾಸಗಳನ್ನು ವಿತರಿಸಲಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ಬಜೆಟನಲ್ಲಿ ಘೋಷಿಸಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ ಹಾಗೂ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರದ ಗಮನ ಸೆಳೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲಿನ ತಾ.ಪಂ.ಎದುರಿಗೆ ಶಾಸಕ ಸುನಿಲ ನಾಯ್ಕ ಅವರಿಗೆ ಎ.ಬಿ.ವಿ.ಪಿ.ಭಟ್ಕಳ ಘಟಕದಿಂದ ಮನವಿಯನ್ನು ಸಲ್ಲಿಸಲಾಯಿತು. 
ಇದಕ್ಕೂ ಪೂರ್ವದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ತಾಲೂಕಾ ಪಂಚಾಯತ್ ಶಾಸಕರ ಕಛೇರಿಗೆ ಬಂದು ಮನವಿ ಸಲ್ಲಿಸಿದರು.
ಈ ಸಂಧರ್ಬದಲ್ಲಿ ಭಟ್ಕಳ ಎಬಿವಿಪಿ ನಗರ ಕಾರ್ಯದರ್ಶಿ ಲೋಕೇಶ ದೇವಾಡಿಗ, ಕಾರ್ಯಕರ್ತ ದಿವಾಕರ ನಾಯ್ಕ, ರಾಘವೆಂದ್ರ ನಾಯ್ಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...