ಬಂದರ್ ಇಲಾಖೆ ಸ್ಥಳದಲ್ಲಿ ಆಶ್ರೀತ ನಾಗರೀಕರಿಗೆ ಹಕ್ಕುಪತ್ರ ವಿತರಿಸುವಂತೆ ವಿಧಾನಸಭೆಯಲ್ಲಿ ಶಾಸಕ ಸುನಿಲ್ ನಾಯ್ಕ ಆಗ್ರಹ

Source: sonews | By Staff Correspondent | Published on 13th December 2018, 7:37 PM | Coastal News | Don't Miss |

ಭಟ್ಕಳ: ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ಸಮುದ್ರ ತೀರದಲ್ಲಿ ಅನಾದಿಕಾಲದಿಂದ ಬಂದರು ಇಲಾಖೆ ಸಂಬಂದ ಪಟ್ಟ ಸ್ಥಳದಲ್ಲಿ ಆಶ್ರಿತರಾಗಿರುವ ನಾಗರಿಕರಿಗೆ ಭೂಮಿ ಹಕ್ಕನ್ನು ಮಾನ್ಯ ಮಾಡುವ ನಿಟ್ಟಿನಲ್ಲಿ  ಪಟ್ಟ ಅಥವಾ ಹಕ್ಕುಪತ್ರ ವಿತರಿಸಬೇಕೆಂದು ವಿಧಾನ ಸಭೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಅಧೀವೇಶನದ 3ನೇ ದಿನದಂದು ಗಮನ ಸೆಳೆಯುವ ಪ್ರಶ್ನೆಯ ಮೂಲಕ ಪೌರಾಡಳಿತ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಲಚಂದ್ರ ಜಾರಕಿಹೊಳೆ ರವರನ್ನು ಒತ್ತಾಯಿಸಿದ್ದಾರೆ. 

ಕಳೆದ ನೂರಾರು ವರ್ಷದಿಂದ ಹೊನ್ನಾವರದ ಕಾಸರಕೋಡ್ ದಿಂದ ಭಟ್ಕಳದ ಗೊರಟೆ ತನಕ ಬಂದರು ಇಲಾಖೆ ಸಂಬಂದಪಟ್ಟ ಸ್ಥಳದಲ್ಲಿ ಮನೆ, ವ್ಯವಹಾರ, ಕೃಷಿ, ತೋಟಗಾರಿಕೆ ಉದ್ದೇಶಕ್ಕಾಗಿ ಸದ್ರಿ ಜಾಗವನ್ನು ಬಳಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಈ ಹಿಂದಿನ ಎಲ್ಲಾ ಸರ್ಕಾರಕ್ಕು ಪ್ರತಿಭಟನೆ ಮನವಿಯ ಮೂಲಕ ಭೂಮಿಯ ಹಕ್ಕು ನೀಡುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಸರ್ಕಾರದ ಗಮನಕ್ಕೆ ಈ ವಿಷಯ ಬಾರದಿರುವದು  ಖೇದಕರ ಸಂಗತಿಯಾಗಿದ್ದು, ಮಾನವೀಯ ದೃಷ್ಟಿಯಿಂದ ಭವಿಷ್ಯದಲ್ಲಿ ಅತಂತ್ರರಾಗುವ ಪರಿಸ್ಥಿಯಿಂದ ಪಾರು ಮಾಡಲು ಈ ಬಡ ಮೀನುಗಾರಿಕೆ ಮತ್ತು ಕೃಷಿ ಅವಲಂಬಿತ ಕುಟುಂಬಕ್ಕೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಶಾಸಕರು ಒತ್ತಾಯಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...