ಪೊಲೀಸರ ವಶಕ್ಕೆ ಸಂಸದ ಪ್ರತಾಪ ಸಿಂಹ; ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ

Source: sonews | By sub editor | Published on 8th March 2019, 5:41 PM | State News | Don't Miss |

ಬೆಂಗಳೂರು: ನಟ ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕೋರ್ಟ್ ಗೆ ಹಾಜರಾಗಿರುವ ಸಂಸದ ಪ್ರತಾಪ್ ಸಿಂಹ ರನ್ನು ನ್ಯಾಯಾಧೀಶರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ವಿ. ಪಾಟೀಲ ಅವರು ಸಂಸದ ಪ್ರತಾಪ್ ಸಿಂಹರನ್ನು ವಶದಲ್ಲಿ ಇರಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಕಳೆದ ಬಾರಿಯ ವಿಚಾರಣೆ ವೇಳೆ ಪ್ರತಾಪ್ ಸಿಂಹ ವಿಚಾರಣೆಗೆ ಗೈರಾಗಿದ್ದರು. ಅವರನ್ನು ಪ್ರತಿನಿಧಿಸುವ ವಕೀಲರೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಇದರನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು ಮತ್ತು ಜಾಮೀನು ರಹಿತ ವಾರಂಟ್ ಅಡಿಯಲ್ಲಿ ಕೋರ್ಟ್ ಗೆ ಹಾಜರುಪಡಿಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶಿಸಿತ್ತು.

Read These Next

ಗಡಿಯಾರ ವ್ಯಾಪಾರಿಯನ್ನು”ಭಯೋತ್ಪಾದಕ’ ಎಂದು ಬಿಂಬಿಸಿದ ಮಾಧ್ಯಮಗಳಿಗೆ ಛೀ,ಥೂ ಎನ್ನುತ್ತಿರುವ ಸಾರ್ವಜನಿಕರು

ಬೆಂಗಳೂರು: ಅಮಾಯಕ ಗಡಿಯಾರ ವ್ಯಾಪಾರಿಯೊಬ್ಬರನ್ನು ‘ಉಗ್ರ’ನೆಂದು ಬಿಂಬಿಸಿ ಕೆಲ ಸುದ್ದಿ ಚಾನೆಲ್ ಗಳು ಸುಳ್ಳು ವದಂತಿಗಳನ್ನು ...

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...