ಭಟ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸಾದಿಕ್ ಮಟ್ಟಾ ನೇಮಕ

Source: S O News service | By Staff Correspondent | Published on 6th December 2016, 7:29 PM | Coastal News |

ಭಟ್ಕಳ : ಕಾಂಗ್ರೆಸ್‌ನ ಅಲ್ಪಸಂಖ್ಯಾತ ವಿಭಾಗದ ತಾಲ್ಲೂಕು ಅಧ್ಯಕ್ಷರಾಗಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ಅವರನ್ನು ನೇಮಕ ಮಾಡಲಾಗಿದೆ. 

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸೈಯ್ಯದ್ ಅಹ್ಮದ್‌ರ ಆದೇಶದಂತೆ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ  ಮೆಹಬೂಬ ಅಲಿಯವರು ಮಹ್ಮದ್ ಸಾಧಿಕ್ ಮಟ್ಟಾ ಅವರನ್ನು ಭಟ್ಕಳ ಅಲ್ಪಸಂಖ್ಯಾತ ವಿಭಾಗದ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ. ಭಟ್ಕಳದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆಗೆ ತೊಡಗಿಸಿಕೊಳ್ಳಬೇಕು ಎಂದೂ ಅವರು ನೇಮಕಾತಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. 

 

Read These Next