ಮುಂಬೈಯಲ್ಲಿ ಭಾರೀ ಮಳೆ

Source: sonews | By sub editor | Published on 29th August 2017, 10:30 PM | National News | Don't Miss |

ಮುಂಬೈ:  ಮುಂಬೈ ಮಂಗಳವಾರ ಬೆಳಗ್ಗೆ ಭಾರೀ ಮಳೆಗೆ ಸಾಕ್ಷಿಯಾಯಿತು. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ನಗರ ಪ್ರದೇಶದ ಹಲವು ಭಾಗಗಳು ಜಲಾವೃತವಾಗಿವೆ. ಇದರಿಂದ ನಗರ ಜೀವನ, ಉಪವಲಯದ ರೈಲ್ವೆ ಸಂಚಾರ ಹಾಗೂ ರಸ್ತೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

 

ಸೋಮವಾರ ಸಂಜೆ 4.30ರ ಹೊತ್ತಿಗೆ ಭಾರೀ ನೆರೆ ಉಂಟಾಗಿತ್ತು. ಮಳೆ ನಿರಂತರ ಮುಂದುವರಿದರೆ, ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಸಿಯೋನ್ ಹಾಗೂ ಅಂಧೇರಿ ಸಬ್‌ ವೇ ಜಲಾವೃತವಾಗಿರುವ ಬಗ್ಗೆ ಮಾತ್ರ ಎರಡು ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಬೃಹನ್ಮುಂಬಯಿ ಪುರಸಭೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಸಿಯೋನ್, ಮಾತುಂಗ, ದಾದರ್‌ನ ವಿವಿಧ ಭಾಗ, ಹಿಂಡ್‌ಮಾತಾ, ವಾಡಾಲಾ, ಘಾಟ್ಕೋಪರ್, ಅಂಧೇರಿ ಹಾಗೂ ಮುಲುಂದ್ ನಂತಹ ಪ್ರದೇಶಗಳು ಜಲಾವೃತವಾಗಿವೆ ಎಂದು ನಾಗರಿಕರು ದೂರಿದ್ದಾರೆ. ಹಲವರು ದೂರು ದಾಖಲಿಸಲು ಹಾಗೂ ಜಲಾವೃತ ಪ್ರದೇಶಗಳ ಮಾಹಿತಿ ನೀಡಲು ಟ್ವಿಟ್ಟರ್ ಬಳಸುತ್ತಿದ್ದಾರೆ. ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಅವ್ಯಾಹತ ಮಳೆಗೆ ಕಳೆದ ಮೂರು ದಿನಗಳಿಂದ ಹಲವು ಪ್ರದೇಶಗಳು ಜಲಾವೃತವಾಗಿವೆ. ಇದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

Read These Next

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...