ಮುಂಡಗೋಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ  

Source: nazir | By Arshad Koppa | Published on 23rd September 2017, 8:14 AM | State News |

ಮುಂಡಗೋಡ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಬೇಜವಾಬ್ದಾರಿ ತೋರುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ತಹಶೀಲ್ದಾರ ಮುಖಾಂತರ ಶುಕ್ರವಾರ ಮನವಿ ಅರ್ಪಿಸಿತು.


ಉತ್ತರಕನ್ನಡ ಜಿಲ್ಲೆ ಹಾಗೂ ತಾಲೂಕ ಮಟ್ಟದ ಇಲಾಖಾ ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಎಸ್‍ಸಿ/ಎಸ್‍ಟಿ ಜರಿಗೆ, ಅಲ್ಪಸಂಖ್ಯಾತರಿಗೆ, ಹಿಂದೂಳಿದ ವರ್ಗದ ಬಡ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದ ಕಾನೂನುಗಲನ್ನು ಜಾರಿಗೆ ತರದೆ  ಇಂಪ್ಲಿಮೇಂಟ್ ಮಾಡದೇ ಮತ್ತು ಸೌಲಭ್ಯಗಳನ್ನು ಸರಿಯಾಗಿ ಒದಗಿಸದೇ ಅನ್ಯಾಯ ಮಾಡುತ್ತಿದ್ದಾರೆ ಹಾಗೂ ಕೆಲವು ಬೇಡಿಕೆಗಳನ್ನು ಕೇಂದ್ರಸರಕಾರ ಹಾಗೂ ರಾಜ್ಯ ಸರಕಾರ ಈಡೇರಿಸ ಬೇಕು. ಕಾನೂನಗಳನ್ನು ಜಾರಿಗೆ ಮಾಡದೇಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ, ಎಸ್.ಫಕ್ಕಿರಪ್ಪ, ತಾಲೂಕ ಅಧ್ಯಕ್ಷ ಬಸವರಾಜ ಹರಿಜನ, ಬಸವಂತಪ್ಪ ಮಡ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೀರುಪತಿ ಕೊಂಡ್ಲಿ, ಜಿಲ್ಲಾ ದಲಿತ ಯುವ ಒಕ್ಕೂಟ ಅಧ್ಯಕ್ಷ ಬಸವರಾಜ ಹಳ್ಳೆಮ್ಮನವರ, ಮಂಜುನಾಥ ಹರಿಜನ, ಭಾಸ್ಕರ ಭೋವಿ, ಮಂಜುನಾಥ ಹರಿಜನ, ಮೈಲಾರಿ ದೇವರಮನಿ, ಯಮುನಾಬಿ ಶಿಂದೆ, ಲಕ್ಷ್ಮೀಬಾಯಿ ರಾಠೋಡ, ಗಿರಿಜವ್ವಾ ಜೋಗೆರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...