ಮುಂಡಗೋಡ: ರೈತ ಹಾಗೂ ಜನ ಪರವಾದ ಕೆಲಸ ಮಾಡುವಲ್ಲಿ ಸಂಪೂರ್ಣ ವಿಪಲವಾದ ರಾಜ್ಯ ಸರ್ಕಾರ-ಗಂಗಾಧರ ಪಾಟೀಲ 

Source: nazir | By Arshad Koppa | Published on 27th May 2017, 9:59 AM | Coastal News |

ಮುಂಡಗೋಡ: ರಾಜ್ಯದ ಸಿದ್ದರಾಮಯ್ಯ ಸರ್ಕಾರ ರೈತ ಹಾಗೂ ಜನ ಪರವಾದ ಕೆಲಸ ಮಾಡುವಲ್ಲಿ ಸಂಪೂರ್ಣ ವಿಪಲವಾಗಿದೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಬಗ್ಗೆ ರೋಷಿಹೋಗಿರುವ ರಾಜ್ಯದ ಜನತೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ. ಮುಂದಿನ 2018 ರ ವಿಧಾನಸಭಾ ಚುನಾವಣೆ ಸಂಪೂರ್ಣ ಕುಮಾರಣ್ಣನ ಚುನಾವಣೆಯಾಗಲಿದೆ ಎಂದು ಜೆ.ಡಿ.ಎಸ್ ರಾಜ್ಯ ರೈತ ಮೋರ್ಚಾಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಹೇಳಿದರು.

ಗುರುವಾರ ಇಲ್ಲಿಯ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ರೈತ ಪರವಾದ ಪಕ್ಷ ಯಾವುದಾದರೂ ಇದೆ ಎಂದಾದರೆ ಅದು ಜೆಡಿಎಸ್ ಮಾತ್ರ. 20 ತಿಂಗಳ ಕುಮಾರಸ್ವಾಮಿ ಅವರ ಜನಪರ ಆಡಳಿತದಲ್ಲಿ ರೈತ ಪರವಾದ ಬಹುತೇಕ ಸಮಸ್ಯೆಗಳನ್ನು ಪರಿಹರಿಸಿ ಜನರ ಮೆಚ್ಚುಗೆ ಪಡೆದಿದ್ದಾರೆ. ರೈತ ಕುಲ ಸಂತೋಷವಾಗಿರಬೇಕಾದರೆ ಜಾತ್ಯತೀತ ಜನತಾ ದಳ ಮತ್ತೆ ಅಧಿಕಾರಕ್ಕೆ ಬರಬೇಕಿರುವುದು ಅನಿವಾರ್ಯ. ವರ್ಷ ಕಳೆದರೂ ಕಳಸಾ ಬಂಡೂರಿ ಯೋಜನೆ ಸಮಸ್ಯೆಯನ್ನು ರಾಜ್ಯದ ಕಾಂಗ್ರೆಸ್ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದಿಂದ ಸಾದ್ಯವಾಗಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕಾಗಿ ಕಚ್ಚಾಟದಲ್ಲಿಯೇ ಕಾಲಹರಣ ಮಾಡುತ್ತಿರುವುದರಿಂದ ನಾವು ಇಂದು ಬೇರೆ ರಾಜ್ಯದವರಿಗೆ ನೀರು ಕೇಳುವಂತಹ ಪರಿಸ್ಥಿತಿ ಬಂದೊದಗಿದೆ. ಅವರಿಗೆ ಜನರಿಗಿಂತ ಅಧಿಕಾರವೇ ಮುಖ್ಯವಾಗಿದೆ. ಹಾಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಛಿಮಾರಿ ಹಾಕಿ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ನೀಡಬೇಕಿದೆ. ಕೇವಲ ಬರಗಾಲ ಘೋಸಿಸುವುದರಿಂದ ಪ್ರಯೋಜನವಾಗುವುದಿಲ್ಲ. ಅದಕ್ಕೆ ತಕ್ಕಂತೆ ಸೂಕ್ತ ಪರಿಹಾರ ಯೋಜನೆ ರೂಪಿಸಬೇಕು. ಪರಿಹಾರ ನೀಡುವಲ್ಲಿ ವಿಳಂಬ ಹಾಗೂ ತಾರತಮ್ಯ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕೂಡ ಎಡವಿದೆ ಎಂದು ಆರೋಪಿಸಿದರು.
ಜೆ ಡಿ.ಎಸ್ ದುರೀಣ ಸಂತೋಷ ರಾಯ್ಕರ, ತುಕಾರಾಮ ಗುಡ್ಕರ, ಮುನಾಫ್ ಮಿರ್ಜಾನಕರ, ಕೇಮಣ್ಣ ಲಮಣ , ನಾಗೇಶ ನಾಯ್ಕ, ಗುರುನಾಥ ಬೆಳವಟಗಿ ಮುಂತಾದವರು ಉಪಸ್ಥಿತರಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...