ಸಾಲದಬಾದೆ ವಿಷಸೇವಿಸಿ ರೈತ ಆತ್ಮಹತೆ

Source: sonews | By sub editor | Published on 13th July 2018, 6:17 PM | Coastal News | Don't Miss |

ಮುಂಡಗೋಡ : ಸಾಲದಬಾದೆ ತಾಳಲಾರದೇ ರೈತನೋರ್ವ ವಿಷಸೇವಿಸಿ ಆತ್ಮಹತ್ಯ ಮಾಡಿಕೊಂಡ ಘಟನೆ ನಡೆದಿದೆ.

ತಾಲೂಕಿನ ಕೋಡಂಬಿ ಗ್ರಾ.ಪಂ ವ್ಯಾಪ್ತಿಯ ಅಶೋಕ ಭಜಂತ್ರಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.

ತನ್ನ ತಂದೆ ಹೆಸರಿನಲ್ಲಿದ್ದ ಹೊಲದ ಮೇಲೆ 1ಲಕ್ಷ ರೂ ಸಾಲ ಹಾಗೂ ಎಲ್.ಎನ್.ಟಿ. ಕಂಪನಿಯಲ್ಲಿ ಟ್ರ್ಯಾಕ್ಟರ ಮೇಲೆ 7 ಲಕ್ಷ ರೂ ಸಾಲ ಮತ್ತು ತಾಯಿ ಹೆಸರಿನಲ್ಲಿ ಸಂಘ, ಹಾಗೂ ಕೈ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಮಾಡಿಕೊಂಡಿರುವ ಸಾಲ ಹೇಗಪ್ಪ ತೀರಿಸುವುದು ಎಂದು ಚಿಂತಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹೊಂದಿ ಗುರುವಾರ ತನ್ನ ಹೊಲದಲ್ಲಿಯೇ ಯಾವುದೋ ಕ್ರಿಮಿನಾಶಕ ಸೇವಿಸಿ ಆಸ್ವಸ್ಥನಾಗಿದ್ದವನನ್ನು ಹುಬ್ಬಳ್ಳಿ ಕಿಮ್ಸಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯದಲ್ಲಿ ಕೊನೆಯುಸಿರುಯೇಳೆದಿದ್ದಾನೆ.

ಈ ಕುರಿತು ಮೃತನ ತಂದೆ ಗುರುವಾರ ರಾತ್ರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...