ವಿದ್ಯಾರ್ಥಿಗಳು ಸಂಸ್ಕಾರವನ್ನು ರೂಢಿಸಿಕೊಳ್ಳುವಂತೆ ಪ್ರೋ.ಎಂ.ಎಂ.ಜಮಾದಾರ್ ಕರೆ

Source: sonews | By sub editor | Published on 27th July 2018, 6:07 PM | Coastal News |

ಭಟ್ಕಳ: ವಿದ್ಯಾರ್ಥಿಗಳು ಸಂಸ್ಕಾರವನ್ನು ರೂಢಿಸಿಕೊಂಡು ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದು ಇಲ್ಲಿನ ಅಂಜುಮಾನ ಕಾಲೇಜಿನ ಉಪನ್ಯಾಸಕ ಪ್ರೊ.ಎಂ.ಎಂ ಜಮಾದಾರ್ ಹೇಳಿದರು. 

ಅವರು ಆರ್.ಎನ್.ಎಸ್. ಪದವಿ ಕಾಲೇಜಿನಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 

ಸಂಸ್ಥೆಯ ಪ್ರಾಚಾರ್ಯ ಮಾಧವ.ಪಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆರ್.ಎನ್.ಎಸ್ ಶೈಕ್ಷಣಿಕ ಸಂಸ್ಥೆಗಳ ನಿರ್ದೇಶಕ ಎಂ.ವಿ. ಹೆಗಡೆ ಮಾತನಾಡಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಆರ್.ಎನ್.ಎಸ್ ವಿದ್ಯಾನಿಕೇತನ ಪ್ರಾಚಾರ್ಯ ಡಾ. ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಸಂಗಡಿಗರು ಪ್ರಾರ್ಥಿಸಿದರು. ತನುಜಾ ನಾಯ್ಕ ಸ್ವಾಗತಿಸಿದರು. ಇಂದಿರಾ ಮೊಗೇರ್ ನಿರೂಪಿಸಿದರು. ರಜನಿ ನಾಯ್ಕ ವಂದಿಸಿದರು. 

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...