ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆಗೆ ಶರಣು

Source: sonews | By Staff Correspondent | Published on 27th September 2017, 7:44 PM | Coastal News | Incidents | Don't Miss |

ಭಟ್ಕಳ: ಮಾನಸಿಕ ಒತ್ತಡವನ್ನು ಎದುರಿಸದೇ ಅಂಗನವಾಡಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ತೂದಳ್ಳಿ ಗ್ರಾಮದಲ್ಲಿ ಬುಧವಾರ ಜರಗಿದೆ. 
ಆತ್ಮಹತ್ಯೆಗೈದ ಶಿಕ್ಷಕಿಯನ್ನು ಶಾರದಾ ರಾಘವೇಂದ್ರ ನಾಯ್ಕ(೩೨) ಎಂದು ಗುರುತಿಸಲಾಗಿದೆ. 
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು ನಿರಂತರ ಅನಾರೋಗ್ಯದಿಂದ ಬಳತ್ತಿರುವುದು ಇವರ ಆತ್ಮಹತ್ಯೆಗೆ ಕಾರಣವಾಗಿರಬಹುದೆಂದು ಅಂದಾಜಿಸಲಾಗಿದ್ದು ತನಿಖೆಯ ನಂತರವೇ ವಿಷಯ ಬಹಿರಂಗವಾಗಲಿದೆ ಎಂದಿದ್ದಾರೆ. ಪ್ರಕರಣ ಮುರುಡೇಶ್ವರ ಠಾಣೆಯಲ್ಲಿ ದಾಖಲಾಗಿದೆ. 
 

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...