ಮುರುಡೇಶ್ವರ: ‘ಬೇಸಿಗೆ- ಶಿಬಿರ’ದಲ್ಲಿ ವಿದ್ಯಾರ್ಥಿಗಳ ಹುಟ್ಟುಹಬ್ಬದ ಆಚರಣೆ 

Source: so english | By Arshad Koppa | Published on 24th April 2017, 8:28 AM | Coastal News |

ಮುರುಡೇಶ್ವರ ಗ್ರಾಮೀಣ ಶಿಕ್ಷಣ ಪ್ರತಿಷ್ಠಾನ (ರಿ.), ಮುರ್ಡೇಶ್ವರ ದ ವತಿಯಿಂದ ನಡೆಸಲ್ಪಡುತ್ತಿರುವ ‘ಬೇಸಿಗೆ- ಶಿಬಿರ’ದ ಕಾರ್ಯಕ್ರಮದಲ್ಲಿ “ಮಕ್ಕಳ ಹುಟ್ಟುಹಬ್ಬ” ವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಯೋಜನಾ ನಿರ್ದೇಶಕಿಯರಾದ ಶ್ರೀಮತಿ ಆಶಾ ಕಾಮತ್‍ರವರ ಹುಟ್ಟುಹಬ್ಬವನ್ನು ವಿದ್ಯಾರ್ಥಿಗಳ ಹುಟ್ಟುಹಬ್ಬವನ್ನಾಗಿ ಆಚರಿಸಬೇಕೆಂಬ ಅವರ ಇಚ್ಛೆಯಂತೆ, ಮಕ್ಕಳಿಂದಲೇ ದೀಪವನ್ನು ಬೆಳಗಿಸಿ, ಕೇಕ್ ಕತ್ತರಿಸುವುದರ ಮೂಲಕ  ಹುಟ್ಟುಹಬ್ಬದ ಗೀತೆಯನ್ನು ಸಮೂಹಿಕವಾಗಿ ಹಾಡಿ, ಅವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಕೋರಲಾಯಿತು. ವಿದ್ಯಾರ್ಥಿಗಳೆಲ್ಲರೂ ಅತೀ ಆನಂದದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ನೆಚ್ಚಿನ ನಿರ್ದೇಶಕಿಯರಿಗೆ ಶುಭ ಹಾರೈಸಿದರು. ಅವರ ಹುಟ್ಟುಹಬ್ಬದ ಪ್ರಯುಕ್ತ ಸಂಸ್ಥೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ತಮ್ಮ ತಮ್ಮೊಳಗೆ ಸಿಹಿ ಹಂಚುವುದರ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದರು.  ‘ಯಕ್ಷಗಾನ ಶೈಲಿಯಲ್ಲಿ ಶ್ರೀ ಮಹಾಗಣಪತಿ ಪೂಜೆಯೊಂದಿಗೆ, ಆರಂಭಿಸಲಾದ ಕಾರ್ಯಕ್ರಮದಲ್ಲಿ  ಶ್ರೀ ಎಸ್. ಎಸ್. ಕಾಮತ್ ರವರು ತಮ್ಮ ಪ್ರಾಸ್ಥಾವಿಕ ನುಡಿಗಳೊಂದಿಗೆ ಸಭಾ ಗಣ್ಯರೆಲ್ಲರನ್ನು ಸ್ವಾಗತಿಸಿದರು. ನಂತರ ಸಭಾ ಗಣ್ಯರಾದ ಶ್ರೀ ಗಣಪತಿ ಕಾಯ್ಕಿಣ  ಹಾಗೂ       ಶ್ರೀ ಕೆ. ಬಿ. ಹೆಗಡೆ ಯವರು ಶ್ರೀಮತಿ ಆಶಾ ಕಾಮತ ರವರಿಗೆ ಹುಟ್ಟುಹಬ್ಬದ ಶುಭಾಶಯ ನೀಡಿ, ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾ ನಿರ್ದೇಶಕಿ ಚಂದ್ರಕಲಾ ಕಾಮತ್‍ರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಚಾರ್ಯೆ ಲತಾ ನಾಯ್ಕ ನಿರೂಪಿಸಿದರು. ಹಾಗೂ ಬೋಧಕರಾದ ಗುಲಾಬಿ ದೇವಡಿಗ ರವರು ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...