ಮುರುಡೇಶ್ವರ:ಗ್ರಾಮೀಣ ಶಿಕ್ಷಣ ಪ್ರತಿಷ್ಠಾನರಿಂದ ಉಚಿತ ಕಂಪ್ಯೂಟರ್ ತರಬೇತಿ

Source: so english | By Arshad Koppa | Published on 27th May 2017, 10:23 AM | Coastal News | Special Report |

ಮುರುಡೇಶ್ವರ ಗ್ರಾಮೀಣ ಶಿಕ್ಷಣ ಪ್ರತಿಷ್ಠಾನ (ರಿ.), ಮುರ್ಡೇಶ್ವರದ ವತಿಯಿಂದ, ಗ್ರಾಮೀಣ ಭಾಗದ 5 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ, ಸಂಸ್ಥೆಯ “ಕಿಡ್ಸ್ ಕಂಪ್ಯೂಟರ್” ಯೋಜನೆಯ  ಅಡಿಯಲ್ಲಿ, ಉಚಿತ ಇಂಗ್ಲೀಷ್ ಭಾಷಾ ತರಬೇತಿ, ಸಾಮಾನ್ಯ ಜ್ಞಾನ, ಬದುಕುವ ಕಲೆ, ನೈತಿಕ ಶಿಕ್ಷಣ, ವಿದ್ಯಾರ್ಥಿಗಳಿಗೆ ಉತ್ತಮ ನಾಗರೀಕರಾಗಲು ಬೇಕಾಗುವ ಅವಶ್ಯಕ ತರಬೇತಿಗಳ ಸೌಲಭ್ಯಗಳೊಂದಿಗೆ, “ಉಚಿತ ಕಂಪ್ಯೂಟರ್ ತರಬೇತಿ” ಹಾಗೂ ಉಚಿತ ಶಿಬಿರಗಳನ್ನು ಏರ್ಪಡಿಸಲಾಗುವುದು. ಗರಿಷ್ಠ 30 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿದ್ದು, ಮೊದಲು ಬಂದವರ ಆಧ್ಯತೆಯ ಮೇರೆಗೆ ಉಚಿತ ಪ್ರವೇಶ ನೀಡಲಾಗುವುದು. ಪ್ರವೇಶ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ. ಈ ತರಬೇತಿಯು ಪ್ರತಿ ಶನಿವಾರ ಹಾಗೂ ಭಾನುವಾರ ಮಧ್ಯಾಹ್ನ; 2.30 ರಿಂದ ಸಂಜೆ: 5.30 ರವರೆಗೆ ನಡೆಯಲಿದ್ದು, ಇದೇ ಬರುವ ಜೂನ್ -15 ರಿಂದ ಆರಂಭಗೊಂಡು 2018ರ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. 


ಮಾತೆಯರು ತಮ್ಮ ಮಕ್ಕಳಿಗೆ ಈ ಶಿಕ್ಷಣದ ಅರಿವು ಮೂಡಿಸಿ, ಉಚಿತವಾಗಿ ತರಬೇತಿಗೆ ಸೇರಿಸಬಹುದೆಂದು ಸಂಸ್ಥೆಯ ಯೋಜನಾ ನಿರ್ದೇಶಕಿಯರಾದ ಶ್ರೀಮತಿ ಆಶಾ ಕಾಮತ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಶ್ರೀ ಎಸ್. ಎಸ್. ಕಾಮತ್, ಆಡಳಿತ ಧರ್ಮದರ್ಶಿಗಳು, 
                             ಮೊ. ನಂ: 9902688754.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...