ಮನೆ ಕರ ಹೆಚ್ಚಳಕ್ಕೆ ಭಟ್ಕಳ ಮುಟ್ಟಳ್ಳಿ ಗ್ರಾಮಸ್ಥರ ವಿರೋಧ

Source: S O News service | By V. D. Bhatkal | Published on 1st September 2018, 8:22 PM | Coastal News |

ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮನೆ ಕರ ಹೆಚ್ಚಳ ಮಾಡಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಪಂಚಾಯತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು, ಹೆಚ್ಚಿನ ಕರ ಪಾವತಿಸಲು ಕಷ್ಟವಾಗುತ್ತದೆ. ಕರ ಹೆಚ್ಚಿಸುವ ನಿರ್ಧಾರವನ್ನು ಇಲ್ಲಿಗೇ ಕೈ ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮಸ್ಥರ ಪರವಾಗಿ ವೆಂಕಟೇಶ ನಾಯ್ಕ, ಗಣಪತಿ ನಾಯ್ಕ, ಕೃಷ್ಣ ನಾಯ್ಕ, ಸತೀಶಕುಮಾರ, ರಾಮಾ ನಾಯ್ಕ, ಕೃಷ್ಣ ನಾಯ್ಕ ಮೊದಲಾದವರು ಪಂಚಾಯತ ಕಚೇರಿಗೆ ಆಗಮಿಸಿದ್ದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಮನವಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ ಅಧ್ಯಕ್ಷೆ ಅಮೀನಾ, ಸದಸ್ಯ ಜಟ್ಟಪ್ಪ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...