ಮುತ್ತಪ್ಪ ರೈಗೆ ಎದುರಾಯ್ತು ‘ಶಸ್ತ್ರಾಸ್ತ್ರ’ ಸಂಕಷ್ಟ

Source: S.O. News Service | By MV Bhatkal | Published on 21st October 2018, 7:23 PM | State News | Don't Miss |

ಬೆಂಗಳೂರು:ಶಸ್ತ್ರಾಸ್ತ್ರಗಳನ್ನು ಇಟ್ಟು ಪೂಜೆ ಮಾಡಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಮುತ್ತಪ್ಪ ರೈ ಅವರಿಗೆ ನೋಟಿಸ್ ಕಳಿಸಿದ್ದಾರೆ. ಇಷ್ಟೊಂದು ಆಯುಧಗಳಿಗೆ ಇಲಾಖೆಯಿಂದ ಅನುಮತಿ ಪಡೆಯಲಾಗಿದೆಯೇ? ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿಯಾದ 24 ಗಂಟೆಯ ಒಳಗಡೆ ಮುತ್ತಪ್ಪ ರೈ ಸಿಸಿಬಿ ಮುಂದೆ ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ.
ಆಯುಧ ಪೂಜೆಯಂದು ಮುತ್ತಪ್ಪ ರೈ ಗನ್, ಪಿಸ್ತೂಲ್, ರಿವಾಲ್ವರ್‍ಗೆ ಪೂಜೆ ಮಾಡಿದ್ದರು. ಶಸ್ತ್ರಾಸ್ತ್ರಗಳನ್ನು ಇಟ್ಟು ಪೂಜೆ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿದ್ದ ಜನರು ಪೊಲೀಸರನ್ನು ಪ್ರಶ್ನಿಸಿದ್ದರು. ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮೈಸೂರಿನ ತಮ್ಮ ಗೆಳೆಯರೋರ್ವರ ನಿವಾಸದಲ್ಲಿ ರಿವಾಲ್ವರ್ ಮತ್ತು ಪಿಸ್ತೂಲ್ಗಳಿಗೆ ಪೂಜೆ ಮಾಡುತ್ತಿರೋ  ಫೋಟೋ  ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು.   ಮುತ್ತಪ್ಪ ರೈ ಮನೆ ಮುಂದೆ ಚಾಪೆಯೊಂದರ ಮೇಲೆ 4 ರಿವಾಲ್ವರ್, 3 ಗನ್, 1 ಡ್ರ್ಯಾಗರ್ ಇಟ್ಟು ಪೂಜೆ ಮಾಡ್ತಿರೋ ಫೋಟೋ ಈಗ ಎಲ್ಲೆಡೆ ಹರಿದಾಡ್ತಿದೆ.
1959ರ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ಯಾವುದೇ ಶಸ್ತ್ರಾಸ್ತ್ರಗಳನ್ನ ವ್ಯಕ್ತಿಗಳು ಹೊಂದಿರಬೇಕಾದರೇ ಪರವಾನಿಗೆ ಪಡೆದಿರಬೇಕು. ಪರವಾನಿಗೆ ಹೊಂದದೇ ಶಸ್ತ್ರಾಸ್ತ್ರಗಳನ್ನ ಹೊಂದಿದ್ದರೆ ಅದು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...