ಮುತ್ತಪ್ಪ ರೈ ವಿಚಾರಣೆ: ಗನ್‌ಮ್ಯಾನ್‌ಗಳು ವಶಕ್ಕೆ

Source: S.O. News Service | By MV Bhatkal | Published on 21st October 2018, 7:56 PM | State News | Don't Miss |

ಬೆಂಗಳೂರು: ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷರೂ ಆದ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಗನ್‌ಮ್ಯಾನ್‌ಗಳನ್ನು ಕಾಟನ್‌ಪೇಟೆ ಪೊಲೀಸರು ಶನಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ರಾಮನಗರ ತಾಲ್ಲೂಕಿನ ಬಿಡದಿ ಸಮೀಪವಿರುವ ತಮ್ಮ ತೋಟದ ಮನೆಯಲ್ಲಿ ಆಯುಧ ಪೂಜೆ ದಿನದಂದು ಮುತ್ತಪ್ಪ ರೈ, ಗನ್, ಪಿಸ್ತೂಲ್, ರೈಫಲ್ ಹಾಗೂ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದರು. ಅದರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಆ ಸಂಬಂಧ ಸಿಸಿಬಿ ಡಿಸಿಪಿ ಎಸ್‌.ಗಿರೀಶ್‌ ನೋಟಿಸ್‌ ನೀಡಿದ್ದರಿಂದಾಗಿ ರೈ, ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಶನಿವಾರ ಮಧ್ಯಾಹ್ನ ಹಾಜರಾದರು. ರಾತ್ರಿಯವರೆಗೂ ವಿಚಾರಣೆ ನಡೆಸಿದ ಎಸಿಪಿ ನೇತೃತ್ವದ ತಂಡ, ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡಿತು.
‘ನನಗೆ ಜೀವ ಬೆದರಿಕೆ ಇದೆ. ಖಾಸಗಿ ಏಜೆನ್ಸಿ ಮೂಲಕ ಏಳು ಗನ್‌ಮ್ಯಾನ್‌ಗಳನ್ನು ಜೊತೆಗೆ ಇಟ್ಟುಕೊಂಡಿದ್ದೇನೆ. ಅವರ ಬಳಿಯ ಶಸ್ತ್ರಾಸ್ತ್ರಗಳನ್ನೇ ನಾನು ಪೂಜೆಗೆ ಇಟ್ಟಿದ್ದೆ’ ಎಂದು ರೈ ಹೇಳಿದರು. ಗನ್‌ಮ್ಯಾನ್‌ಗಳ ಶಸ್ತ್ರಾಸ್ತ್ರಗಳ ಪರವಾನಗಿ ಪರಿಶೀಲಿಸಿದಾಗ ಕೆಲವು ಅನುಮಾನಗಳು ಕಂಡುಬಂದವು. ಆ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ’ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಹೇಳಿದರು.
‘ಗನ್‌ಮ್ಯಾನ್‌ಗಳನ್ನು ಒದಗಿಸಿರುವ ಏಜೆನ್ಸಿ ಬಗ್ಗೆ ಮಾಹಿತಿ ಕಲೆಹಾಕಿದಾಗ, ಆ ಏಜೆನ್ಸಿಯು ತನ್ನ ಪರವಾನಗಿ ನವೀಕರಣ ಮಾಡಿಸಿಕೊಳ್ಳದಿರುವುದು ತಿಳಿಯಿತು. ಜೊತೆಗೆ, ರೈಗೆ ಭದ್ರತೆ ಒದಗಿಸಲು ಮಾಡಿಕೊಂಡಿದ್ದ ಒಪ್ಪಂದದ ಅವಧಿ ಮುಕ್ತಾಯವಾಗಿದ್ದು ಗಮನಕ್ಕೆ ಬಂತು. ಹೀಗಾಗಿ, ಏಜೆನ್ಸಿ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಟನ್‌ಪೇಟೆ ಪೊಲೀಸರಿಗೆ ಸೂಚಿಸಲಾಯಿತು. ಏಜೆನ್ಸಿ ಅಧೀನದಲ್ಲಿ ಕೆಲಸ ಮಾಡುತ್ತಿರುವ ಗನ್‌ಮ್ಯಾನ್‌ಗಳನ್ನು ಕಾಟನ್‌ಪೇಟೆ ಪೊಲೀಸರೇ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದು ತಿಳಿಸಿದರು.
‘ಅಗತ್ಯಬಿದ್ದರೆ ಪುನಃ ವಿಚಾರಣೆಗೆ ಕರೆಸಲಾಗುವುದೆಂದು ಹೇಳಿ ಮುತ್ತಪ್ಪ ರೈ ಅವರನ್ನು ಕಚೇರಿಯಿಂದ ರಾತ್ರಿಯೇ ಕಳುಹಿಸಲಾಗಿದೆ’ ಎಂದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...