ಕಾರವಾರ: ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2018

Source: S O News Service | By I.G. Bhatkali | Published on 1st October 2018, 6:43 PM | Coastal News | State News | Don't Miss |

ಕಾರವಾರ: ಜಗತ್ತಿನ ಪ್ರಸಿದ್ದ ಮೈಸೂರು ದಸರಾ ಉತ್ಸವ-2018ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅ.10 ರಿಂದ ಅ.19 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2018ನ್ನು ಕಾಡಾ ಮೈದಾನ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2,000ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರುಅವರ ಹೆಸರಿನಲ್ಲಿ ಡಿ.ಡಿಯನ್ನು ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ,ಜೆ.ಸಿ ರಸ್ತೆ ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ ಯೊಂದಿಗೆ ಅ.6 ರಂದು ಸಂಜೆ 5 ರೊಳಗಾಗಿ ಕಚೇರಿಗೆ ಅಥವಾ ಇ-ಮೇಲ್  [email protected] ಮೂಲಕ ಸಲ್ಲಿಸಬಹುದು.

ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ,ಜೆ.ಸಿ ರಸ್ತೆ ಬೆಂಗಳೂರು-560002 ದೂ.ಸಂ: 080-22484516/22107704 ನ್ನು ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...