ಪ್ರಧಾನಿ ಮೋದಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Source: sonews | By Staff Correspondent | Published on 1st May 2018, 6:21 PM | State News | Don't Miss |

ಮೈಸೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಗರದ ಟೌನ ಹಾಲ್‌ ಬಳಿ ಉ‌ದ್ಯೋಗಕ್ಕಾಗಿ ಯುವಜನ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  

ಬಿಜೆಪಿಯ ಚುನಾವಣಾ ಪ್ರಚಾರ ಸಭೆಗೆ ಚಾಮರಾಜನಗರದ ಸಂತೇಮರಹಳ್ಳಿಗೆ ಆಗಮಿಸುತ್ತಿದ್ದ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟಿಸಲು ರಾಜ್ಯದ ನಾನ ಕಡೆಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

ಮೈಸೂರಿನಿಂದ ಸಂತೇಮರಹಳ್ಳಿಗೆ ಕಾಲ್ನಡಿಗೆ ಮೂಲಕ ತೆರಳಲು ಮುಂದಾಗಿದ್ದ ವಿದ್ಯಾರ್ಥಿಗಳನ್ನು ಸೋಮವಾರವೇ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು. ಸಂತೇಮರಹಳ್ಳಿಗೆ ಹೊಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಯೇ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರ ಜಾರಿಗೆ ತಂದಿರುವ ಕೈಗಾರಿಕ ನೀತಿಯನ್ನು ಸುಟ್ಟುಹಾಕಿ ಕೂಡಲೇ ಈ ನೀತಿಯನ್ನು ವಾಪಸ್ ಪಡೆಯಬೇಕು. ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂಬ ನಿಮ್ಮ ಭರವಸೆ ಹುಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಯುವಜನರು ಯಾವ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ರಾಜೇಶ್ ಅಕ್ಕಿ, ಪುಷ್ಪಲತಾ, ಸರೋವರ್ ಬೆಂಕಿಕೆರೆ, ಮುತ್ತುರಾಜ್, ನರಸಿಂಹಮೂರ್ತಿ, ದಿನೇಶ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...