ನಾಗೂರಿನಲ್ಲಿ ಸರಣಿ ಅಪಘಾತ : ಇಬ್ಬರು ಸಾವು : ಹದಿನೈದಕ್ಕೂ ಅಧಿಕ ಪ್ರಯಾಣಿಕರು ಗಂಭೀರ

Source: S O News | By MV Bhatkal | Published on 27th March 2017, 10:00 PM | Coastal News | Don't Miss |

ಕುಂದಾಪುರ: ನಾಗೂರಿನಲ್ಲಿ ಸೋಮವಾರ ಸಂಜೆ ಸುಮಾರು ಏಳು ಗಂಟೆಗೆ ನಡೆದ ಸರಣಿ ಅಪಘಾತದಲ್ಲಿ ಲಾರಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಟ್ಯಾಂಕರ್ ಪೆಟ್ರೋಲ್ ತುಂಬಿಸಿಕೊಂಡು ಕುಂದಾಪುರ ಕಡೆಯಿಂದ ಗೋವಾ ಕಡೆಗೆ ಪ್ರಯಾಣಿಸುತ್ತಿತ್ತು. ಎದುರುಗಡೆಯಿಂದ ಬಂದ ಅಂಬಾಜಿ ಎನ್ನುವ ಖಾಸಗೀ ಬಸ್ ಅತೀ ವೇಗವಾಗಿ ಚಲಾಯಿಸಿ ಓವರ್‍ಟೇಕ್ ಮಾಡಿ ಟ್ಯಾಂಕರ್‍ಗೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದೇ ಸಂದರ್ಭ ಹಿಂದಿನಿಂದ ಬರುತ್ತಿದ್ದ ಬೈಕಿಗೂ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಬೈಕ್ ಸವಾರನೂ ಸೇರಿದಂತೆ 28 ಜನ ಗಂಭೀರ ಗಾಯಗೊಂಡಿದ್ದಾರೆ.

  ಅಪಘಾತದ ತೀವ್ರತೆಗೆ ಲಾರಿ ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ದಿನ ನಿತ್ಯ ಸಂಚರಿಸುತ್ತಿದ್ದ ಖಾಸಗೀ ಬಸ್ ಇಂದು ಇಲ್ಲದೇ ಇರುವ ಕಾರಣಕ್ಕೆ ಅದೇ ಸಮಯಕ್ಕೆ ಬೇರೆ ಬಸ್ ತರಿಸಿ ಓಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಚಾರ ತಡವಾದ ಕಾರಣಕ್ಕೆ ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಮೃತ ಪಟ್ಟ ಟ್ಯಾಂಕರ್ ಚಾಲಕನನ್ನು ಕುಮದಾಪುರ ಸರ್ಕಾರೀ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸುಮಾರು  ಒಂದೂವರೆ ತಾಸುಗಳ ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೈಂದೂರು ಪೊಲೀಸರು ಹಾಗೂ ಸಾರ್ವಜನಿಕರು ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಹಾಗೂ ಹೆದ್ದಾರಿ ತೆರವು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಕಾರವಾರದವರೆಗೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಕಳೆದ ಕೆಲವು ತಿಂಗಳಿಂದ ಅಪಘಾತಗಳು ಅತೀ ಹೆಚ್ಚಾಗಿ ನಡೆಯುತ್ತಿರುವುದು ಕಂಡು ಬರುತ್ತಿದ್ದು, ಸಂಚಾರ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿರುವುದು ಆತಂಕ ಸೃಷ್ಟಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...