ಭಟ್ಕಳಕ್ಕೆ ಬೇಕು ಉರ್ದು ಭವನ-ಇನಾಯತುಲ್ಲಾ

Source: sonews | By Staff Correspondent | Published on 25th July 2018, 6:28 PM | Coastal News | State News | Don't Miss |

ನಮ್ಮಲ್ಲಿನ ಸಣ್ಣಪುಟ್ಟ ಸಮುದಾಯಗಳು ತಮ್ಮದೆ ಆದ ಪ್ರತ್ಯೇಕ ಸಮುದಾಯ ಭವನಗಳನ್ನು ಹೊಂದಿದ್ದು ಸರ್ಕಾರದ ಅನುದಾನಗಳ ಮೂಲಕ ನಿರ್ಮಿಸಿಕೊಂಡಿದ್ದಾರೆ. ಆದರೆ ಭಟ್ಕಳದಲ್ಲಿ ಶೇ.30ರಷ್ಟಿರುವ ಮುಸ್ಲಿಮರಿಗೆ ಮಾತ್ರ ಇದುವರೆಗೆ ಯಾವುದೇ ಭವನವಾಗಲಿ ಕಲ್ಯಾಣಮಂಟಪವಾಗಲಿ ಇರುವುದಿಲ್ಲ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಎಲ್ಲ ರೀತಿಯಿಂದ ಪ್ರಯೋಜನಕ್ಕೆ ಬರುವ ಉರ್ದು ಭವನ ನಿರ್ಮಾಣಕ್ಕೆ ಮುಂದಾಗಬೇಕೆಂದು ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಅಭಿಪ್ರಾಯ ಪಟ್ಟರು. 

ಅವರು ಬುಧವಾರ ತಂಝೀಮ್ ಕಾರ್ಯಲಯದಲ್ಲಿ ನಡೆದ ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಇರುವ ವಿವಿಧ ಯೋಜನೆಗಳ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ದೊರೆಯುವ ಪ್ರತಿಯೊಂದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ತಂಝೀಮ್ ಸಂಸ್ಥೆ ಮುಂದಿನ ದಿನಗಳಲ್ಲಿ ಮಾಡಲಿದೆ. ಶಾದಿ ಮಹಲ್ ನ ಬೇಡಿಕೆ ಭಟ್ಕಳದಲ್ಲಿ ಈಗ ಕೇಳಿ ಬರುತ್ತಿದ್ದು ಅದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು. 

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...