ನವದೆಹಲಿ: ಇಂದಿನಿಂದ ಒಂದು ವಾರದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ

Source: so english | By Arshad Koppa | Published on 25th September 2016, 9:23 PM | National News |

ನವದೆಹಲಿ, ಸೆ ೨೫: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ’ಸ್ವಚ್ಛ ಭಾರತ’ ಅಭಿಯಾನವನ್ನು ಇಂದಿನಿಂದ ಒಂದು ವಾರದವರೆಗೆ ದೇಶದಾದ್ಯಂತ ನಡೆಸಲಾಗುವುದು. 

’ಸ್ವಚ್ಛ ಭಾರತ ವಾರ’ ಎಂಬ ಹಣೆಪಟ್ಟಿಯನ್ನು ಹೊತ್ತ ಈ ಅಭಿಯಾನ ಎರಡು ವರ್ಷದ ಹಿಂದೆ, ೨೦೧೧ರ ಗಾಂಧಿ ಜಯಂತಿಯಂದು ಪ್ರಾರಂಭವಾಗಿದ್ದು ಇದೇ ಅಭಿಯಾನದ ಹೆಸರಿನಲ್ಲಿ ಉದ್ಘಾಟನೆಗೊಂಡಿತ್ತು. 

ಈ ಅಭಿಯಾನದ ಅಂಗವಾಗಿ ಸೆ. ೩೦ ರಂದು ವಿಜ್ಞಾನ ಭವನದಲ್ಲಿ India Sanitation Conference (INDOSAN-2016) ಎಂಬ ಸ್ವಚ್ಛತಾ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಅಭಿಯಾನವನ್ನು ನಗರಾಭಿವೃದ್ದಿ ಘಟಕ ಹಾಗೂ ಕುಡಿಯುವ ನೀರಿನ ಸಚಿವಾಲಯ ಹಮ್ಮಿಕೊಂಡಿದೆ. 

ಇಂಡೋಸಾನ್ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ, ಪ್ರಮುಖ ನಗರಾಭಿವೃದ್ದಿ ಸಚಿವರು, ಜಿಲ್ಲಾಧಿಕಾರಿಗಳೂ ಆಗಮಿಸಲಿದ್ದಾರೆ. 

ಈ ಸಂದರ್ಭದಲ್ಲಿ ದೇಶದಲ್ಲಿ ಸ್ವಚ್ಛತೆಗಾಗಿ ಕಾರ್ಯನಿರ್ವಹಿಸಿದ ಹನ್ನೊಂದು ವಿಭಾಗದ ಪ್ರಮುಖ ವ್ಯಕ್ತಿಗಳನ್ನು ಪ್ರಧಾನಿಯವರು ಸನ್ಮಾನಿಸಲಿದ್ದಾರೆ. 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...