ಪೆಟ್ರೋಲ್,ಡಿಸೇಲ್ ದರಗಳು ಹೆಚ್ಚಳ; ರವಿವಾರ ರಾತ್ರಿಯಿಂದಲೇ ಜಾರಿ

Source: S O News service | By Staff Correspondent | Published on 15th January 2017, 11:53 PM | National News | Don't Miss |

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಮತ್ತೊಮ್ಮೆ ಏರಿಕೆಯಾಗಿದ್ದು, ಜನವರಿ 15ರಿಂದ ನೂತನ ದರ ಜಾರಿಗೆ ಬರಲಿದೆ. ಪೆಟ್ರೋಲ್ ಲೀಟರೊಂದಕ್ಕೆ 42 ಪೈಸೆ ಹಾಗೂ ಡೀಸೆಲ್ ಗೆ 1 ರೂ. 3 ಪೈಸೆ ಏರಿಕೆಯಾಗಿದೆ.  ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಬೆಲೆಯೇರಿಕೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಬೆಲೆಯೇರಿಕೆಯ ನಂತರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 71.02 ಹಾಗೂ ಡೀಸೆಲ್ ದರ 58.85 ರೂ.ಗೆ ಏರಿಕೆಯಾಗಲಿದೆ.

‘’ಪೆಟ್ರೋಲ್ ಹಾಗೂ ಡೀಸೆಲ್ ಕಚ್ಛಾವಸ್ತುಗಳ ಬೆಲೆಯೇರಿಕೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಬೆಲೆಯನ್ನು ಹೆಚ್ಚಿಸಿದೆ. ತೈಲ ಬೆಲೆಯೇರಿಕೆಯಾಗಿ ಇದರ ಪರಿಣಾಮ ಗ್ರಾಹಕ ಮೇಲೆ ಬೀರಿದೆ” ಎಂದು ಮೂಲಗಳು ತಿಳಿಸಿವೆ. ಜನವರಿ 2 ರಂದು ಪೆಟ್ರೋಲ್ ದರ 1.29 ರೂ. ಹಾಗೂ ಡೀಸೆಲ್ ದರ 97 ಪೈಸೆ ಏರಿಕೆಯಾಗಿತ್ತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...