”ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀರಿಂದ ಪತ್ರಿಕಾಗೋಷ್ಟಿ

Source: sonews | By sub editor | Published on 12th January 2018, 5:18 PM | State News | National News | Special Report | Don't Miss |

ಹೊಸದಿಲ್ಲಿ: ಅಭೂತಪೂರ್ವ ಕ್ರಮವೊಂದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ನ್ಯಾಯಾಧೀಶರು ಶುಕ್ರವಾರ ಸುದ್ದಿಗೋಷ್ಠಿಯೊಂದನ್ನು ಕರೆದು ದೇಶದ ಅತ್ಯುನ್ನತ ನ್ಯಾಯಾಲಯವನ್ನು ಕಾಡುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಬಿ.ಎಚ್.ಲೋಯಾ ಅವರ ಸಾವಿನ ಕುರಿತ ಪ್ರಕರಣ ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿನ ನ್ಯಾಯಾಧೀಶರ ರೋಸ್ಟರ್ ಸುತ್ತಲಿನ ವಿವಾದಗಳು ವಿಷಯಗಳನ್ನು ಸೃಷ್ಟಿಸಿವೆ.

ನ್ಯಾಯಾಧೀಶರು ಸುದ್ದಿಗೋಷ್ಠಿಯನ್ನು ಕರೆದಿದ್ದು ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿಯೇ ಇದು ಪ್ರಥಮ ಬಾರಿಯಾಗಿದೆ. ನ್ಯಾ.ಜೆ.ಚೆಲಮೇಶ್ವರ ಅವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನ್ಯಾಯಮೂರ್ತಿಗಳಾದ ರಂಜನ ಗೊಗೊಯ್, ಮದನ ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರೂ ಮಾತನಾಡಿದರು. ಸರ್ವೋಚ್ಚ ನ್ಯಾಯಾಲಯವು ಕಲಾಪದಲ್ಲಿರುವಾಗಲೇ ಮತ್ತು ಅತ್ಯುನ್ನತ ನ್ಯಾಯಾಲಯಕ್ಕೆ ಎರಡು ಪ್ರಮುಖ ನೇಮಕಗಳ ಎರಡು ದಿನಗಳ ಬಳಿಕ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗಾರರು ಪದೇಪದೇ ಪ್ರಶ್ನಿಸಿದಾಗ ನ್ಯಾ.ಗೊಗೊಯ್ ಅವರು, ವಿಶೇಷ ಸಿಬಿಐ ನ್ಯಾಯಾಧೀಶ ಲೋಯಾ ಅವರ ಸಾವಿನ ಸುತ್ತಲಿನ ವಿವಾದಗಳಿಂದಾಗಿ ಸುದ್ದಿಗೋಷ್ಠಿಯನ್ನು ಕರೆಯುವಂತಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನ್ಯಾ.ಚೆಲಮೇಶ್ವರ ಅವರು ಇದು ಭಾರತದ ಮತ್ತು ನ್ಯಾಯಿಕ ಸಂಸ್ಥೆಗಳ ಇತಿಹಾಸದಲ್ಲಿ ಒಂದುಅಸಾಧಾರಣಘಟನೆಯಾಗಿದೆ ಎಂದು ಬಣ್ಣಿಸಿದರು. ಕೆಲವೊಮ್ಮೆ ಸರ್ವೋಚ್ಚ ನ್ಯಾಯಾಲಯದ ಆಡಳಿತ ಕ್ರಮಬದ್ಧವಾಗಿರುವುದಿಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ನಾವು ಅಷ್ಟಾಗಿ ಬಯಸಿರದ ಹಲವಾರು ಸಂಗತಿಗಳು ನಡೆದಿವೆ. ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶರಾಗಿ ನಮಗೆ ದೇಶ ಮತ್ತು ನಾವು ಸೇವೆ ಸಲ್ಲಿಸುತ್ತಿರುವ ಸಂಸ್ಥೆಯೆಡೆಗೆ ಜವಾಬ್ದಾರಿಗಳಿವೆ. ಕೆಲವು ವಿಷಯಗಳು ಕ್ರಮಬದ್ಧವಾಗಿಲ್ಲ ಮತ್ತು ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಪರಿಹಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರಿಗೆ ಮನದಟ್ಟು ಮಾಡಲು ನಾವು ಪ್ರಯತ್ನಿಸಿದ್ದೆವು. ದುರದೃಷ್ಟವಶಾತ್ ನಮ್ಮ ಪ್ರಯತ್ನಗಳು ವಿಫಲಗೊಂಡಿವೆ. ಸರ್ವೋಚ್ಚ ನ್ಯಾಯಾಲಯವು ತನ್ನ ಗಾಂಭೀರ್ಯವನ್ನು ಕಾಯ್ದುಕೊಳ್ಳಬೇಕು ಎಂದು ನಾವು ಬಲವಾಗಿ ನಂಬಿದ್ದೇವೆ. ಮುಕ್ತ ನ್ಯಾಯಾಂಗವಿಲ್ಲದಿದ್ದರೆ ಪ್ರಜಾಪ್ರಭುತ್ವವು ಬದುಕುಳಿಯುವುದಿಲ್ಲ ಎಂದು ಹೇಳಿದರು.

ಇಂದು ಬೆಳಿಗ್ಗೆ ನಿರ್ದಿಷ್ಟ ಮನವಿಯೊಂದಿಗೆ ನಾವು ಮುಖ್ಯ ನ್ಯಾಯಮೂರ್ತಿಗಳ ಬಳಿಗೆ ತೆರಳಿದ್ದೆವು. ಆದರೆ ದುರದೃಷ್ಟವಶಾತ್ ನಮ್ಮನ್ನು ನಿರಾಕರಿಸಲಾಗಿದೆ ಎಂದು ತಿಳಿಸಿದ ಅವರು, ಹೀಗಾಗಿ ವಿಷಯವನ್ನು ರಾಷ್ಟ್ರದ ಮುಂದಿಡುವುದು ಬಿಟ್ಟರೆ ಅನ್ಯದಾರಿಯು ನಮಗುಳಿದಿಲ್ಲ. ಸರ್ವೋಚ್ಚ ನ್ಯಾಯಾಲಯ ಅಥವಾ ರಾಷ್ಟ್ರದ ಕುರಿತು ನಮಗೆ ಕಾಳಜಿಯಿಲ್ಲ ಎಂದು ಹೇಳಿಸಿಕೊಳ್ಳಲು ನಾವು ಬಯಸುವುದಿಲ್ಲ. ಸುಮಾರು ನಾಲ್ಕು ತಿಂಗಳ ಹಿಂದೆ ನಾವೆಲ್ಲರೂ ಸಹಿ ಮಾಡಿದ್ದ ಪತ್ರವೊಂದನ್ನು ಮುಖ್ಯ ನ್ಯಾಯಮೂರ್ತಿ ಗಳಿಗೆ ನೀಡಿದ್ದವು. ನಿರ್ದಿಷ್ಟ ವಿಷಯವೊಂದನ್ನು ನಿರ್ದಿಷ್ಟ ರೀತಿಯಲ್ಲಿ ನಿರ್ವಹಿಸಬೇಕು ಎಂದು ನಾವು ಬಯಸಿದ್ದೆವು. ಅದೇನೋ ಆಯಿತು, ಆದರೆ ಅದು ಸರ್ವೋಚ್ಚ ನ್ಯಾಯಾಲಯದ ಪ್ರಾಮಾಣಿಕತೆಯ ಕುರಿತು ಇನ್ನಷ್ಟು ಪ್ರಶ್ನೆಗಳನ್ನು ಎತ್ತಿತ್ತು. ಮುಖ್ಯ ನ್ಯಾಯಮೂರ್ತಿಗಳ ನಾಲ್ವರು ಅತ್ಯಂತ ಹಿರಿಯ ಸಹೋದ್ಯೋಗಿಗಳು ಅವರ ಬಳಿಗೆ ತೆರಳಿದ್ದರೂ ಯಾವುದೇ ಬದಲಾವಣೆಯಾಗಿಲ್ಲ ಎಂದರು. ವಾಸ್ತವವನ್ನು ನಿಮ್ಮೆದುರು ಬಿಚ್ಚಿಡುವ ಮೂಲಕ ದೇಶಕ್ಕಾಗಿ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತಿದ್ದೇವೆ ಎಂದು ನ್ಯಾ.ಗೊಗೊಯ್ ಹೇಳಿದರು.

ತಾವು ಯಾವುದೇ ರಾಜಕೀಯವನ್ನು ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಧೀಶರು, ತಾವು ಯಾವ ವಿಷಯಗಳನ್ನು ಎತ್ತಿದ್ದೇವೆ ಮತ್ತು ಕುರಿತು ತಾವು ಏನನ್ನು ಬಯಸಿದ್ದೇವೆ ಎನ್ನುವುದನ್ನು ನಿರ್ದಿಷ್ಟವಾಗಿ ತಿಳಿಸಲಿಲ್ಲ. ಆದರೆ ತಾವು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಿದ್ದ ಪತ್ರವನ್ನು ಮಾಧ್ಯಮಗಳಿಗೆ ತಲುಪಿಸುತ್ತೇವೆ ಮತ್ತು ತಾವು ಹೇಳಬಯಸಿದ್ದ ಎಲ್ಲ ವಿಷಯಗಳೂ ಅದರಲ್ಲಿವೆ ಎಂದು ಹೇಳಿದರು.

ರಾಷ್ಟ್ರ ಮತ್ತು ಸಂಸ್ಥೆಯ ಮೇಲೆ ದೂರಗಾಮಿ ಪರಿಣಾಮಗಳನ್ನು ಹೊಂದಿರುವ ಪ್ರಕರಣಗಳನ್ನು ಮುಖ್ಯ ನ್ಯಾಯಮೂರ್ತಿಗಳು ಯಾವುದೇ ತಾತ್ವಿಕ ಆಧಾರವಿಲ್ಲದೆ ತಮ್ಮ ಆಯ್ಕೆಯ ಪೀಠಗಳಿಗೆ ಒಪ್ಪಿಸಿದ್ದ ಉದಾಹರಣೆಗಳಿವೆ. ಯಾವುದೇ ಬೆಲೆ ತೆತ್ತಾದರೂ ಇದನ್ನು ತಡೆಯಬೇಕಾಗಿದೆ ಎಂದರು.

ಆರ್.ಪಿ.ಲೂಥ್ರಾ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ನಿರ್ಧಾರದಲ್ಲಿ ನಮ್ಮಲ್ಲಿ ಇಬ್ಬರು ನ್ಯಾಯಾಧೀಶರು ನ್ಯಾಯಾಧೀಶರ ನೇಮಕ ಪ್ರಕ್ರಿಯೆಯನ್ನು ಪುನರ್ ಪರಿಶೀಲಿಸಬೇಕು ಮತ್ತು ವಾಗ್ದಂಡನೆಗೆ ಹೊರತಾದ ತಿದ್ದುಪಡಿ ಕ್ರಮಗಳಿಗಾಗಿ ವ್ಯವಸ್ಥೆಯೊಂದನ್ನು ರೂಪಿಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆವು. ಪ್ರಕ್ರಿಯಾ ನಿಯಮಾವಳಿ ಕುರಿತು ಏಳು ಮಾನ್ಯ ನ್ಯಾಯಾಧೀಶರ ಪೈಕಿ ಯಾರೊಬ್ಬರೂ ಯಾವುದೇ ಅಭಿಪ್ರಾಯವನ್ನು ನೀಡಿರಲಿಲ್ಲ. ಪ್ರಕ್ರಿಯಾ ನಿಯಮಾವಳಿಗೆ ಸಂಬಂಧಿಸಿದಂತೆ ಯಾವುದೇ ವಿಷಯವನ್ನಾದರೂ ಮುಖ್ಯ ನ್ಯಾಯಮೂರ್ತಿಗಳ ಸಮಾವೇಶದಲ್ಲಿ ಮತ್ತು ಪೂರ್ಣ ಪೀಠದಿಂದ ಚರ್ಚೆಯಾಗ ಬೇಕಾಗುತ್ತದೆ. ಇಷ್ಟೊಂದು ಮುಖ್ಯ ವಿಷಯವನ್ನು ನ್ಯಾಯಾಂಗವು ಕೈಗೆತ್ತಿಕೊಳ್ಳಬೇಕಾದರೂ ಅದನ್ನು ಸಂವಿಧಾನ ಪೀಠವು ಮಾತ್ರ ನಿರ್ವಹಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Read These Next

ಬಯಲು ಸೀಮೆಯ ಹಾಲು ಒಕ್ಕೂಟದ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸುವಂತೆ ರೈತಸಂಘ ಆಗ್ರಹ

ಕೋಲಾರ: ಬಯಲು ಸೀಮೆಯ ಹಾಲು ಒಕ್ಕೂಟದ ಬ್ರಹ್ಮಾಂಡ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸಬೇಕು ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಭಟ್ಕಳದಿಂದ ಕಾಲು ಕೀಳಲು ಸಿದ್ಧವಾಗಿರುವ ದೂರದರ್ಶನ ಕೇಂದ್ರ..?

ಭಟ್ಕಳ: ಪ್ರಸಕ್ತ ಕಾಲಘಟ್ಟದಲ್ಲಿ ಭಟ್ಕಳ ಎಂಬ ಪುಟ್ಟ ಊರು ಬೆಳೆದು ನಿಂತಿದೆ. ಅಂತರಾಷ್ಟ್ರೀಯ ಆವಿಷ್ಕಾರಗಳನ್ನು ಕಾಣುವ ತವಕ ...

ಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರ

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ನಡೆದ ಬೆಳವಣಿಗೆಗಳು ಕೇಂದ್ರದಲ್ಲಿ ಹಾಲೀ ಅಧಿಕಾರದಲ್ಲಿರುವ ಪಕ್ಷದ ಆಳ್ವಿಕೆಯ ವಿರುದ್ಧ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಸಾವಿನ ಕೂಪ ದ ಲ್ಲಿ ಗಣಿಗಾರಿಕೆ

ಮೇಘಾಲಯದಲ್ಲಿ ಇತ್ತೀಚೆಗೆ ಸಂಭವಿಸಿದ ಗಣಿಕಾರ್ಮಿಕರ ಸಾವುಗಳು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಪ್ರತಿಪಾದಕರಿಗೆ ನಾಚಿಕೆ ...

ಸುಸೂತ್ರವಾಗಿ ಆರಂಭಗೊಂಡ ಐಸಿಎಸ್‍ಇ ಪರೀಕ್ಷೆ; ಮೊದಲ ದಿನ ಎಲ್ಲ ವಿದ್ಯಾರ್ಥಿಗಳು ಹಾಜರು

ಭಟ್ಕಳ: ಇದೇ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ...