ಲೈಂಗಿಕ ಕಿರುಕುಳ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಯತ್ನ: ಕಾಂಗ್ರೆಸ್ ಆರೋಪ

Source: sonews | By sub editor | Published on 7th August 2017, 11:43 PM | National News | Don't Miss |

ಹೊಸದಿಲ್ಲಿ: ಚಂಡಿಗಢ ಆಡಳಿತ ಹಾಗೂ ಪೊಲೀಸರನ್ನು ನಿಯಂತ್ರಿಸುವ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವಾಲಯ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

 

ಈ ಪ್ರಕರಣ ಅಪಹರಣ ಹಾಗೂ ಮಹಿಳೆಯ ಗೌರವಕ್ಕೆ ಕುಂದು ತರುವಂತದ್ದು. ಇವೆರೆಡು ಜಾಮೀನು ರಹಿತ ಪ್ರಕರಣ ಎಂದು ಪೂರ್ವ ಚಂಡಿಗಢದ ಡಿಎಸ್‌ಪಿ ಹಾಗೂ ತನಿಖಾಧಿಕಾರಿ ಸತೀಶ್ ಕುಮಾರ್ 2.30ಕ್ಕೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, 5 ಗಂಟೆಗೆ ನಡೆಸಿದ ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ಸತೀಶ್ ಕುಮಾರ್, ಇದು ಹಿಂಬಾಲಿಸಿದ ಹಾಗೂ ತಡೆಗಟ್ಟಿದ ಪ್ರಕರಣ ಎಂದು ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

 ತನ್ನ ಪಕ್ಷದ ನಾಯಕ ಹಾಗೂ ಆತನ ಪುತ್ರನನ್ನು ರಕ್ಷಿಸಲು ಪ್ರಕರಣ ಮುಚ್ಚಿ ಹಾಕಲು ಗೃಹ ಸಚಿವಾಲಯ ಹಾಗೂ ಬಿಜೆಪಿ ಚಂಡಿಗಢ ಆಡಳಿತ ಹಾಗೂ ಚಂಡಿಗಢ ಪೊಲೀಸರನ್ನು ನೇರವಾಗಿ ನಿಯಂತ್ರಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ಈ ಪ್ರಕರಣ ಭಾರತೀಯ ದಂಡ ಸಂಹಿತೆಯ 365ನೇ ಕಲಂ ಹಾಗೂ 511 ಕಲಂ ಅಡಿಯಲ್ಲಿ ಬರುತ್ತದೆ ಎಂದು ಕುಮಾರ್ ಉಲ್ಲೇಖಿಸಿರುವುದಾಗಿ ಅವರು ಹೇಳಿದರು.

ಆರೋಪಿ ಬಾಲಕಿಯನ್ನು 7 ಕಿಲೋ ಮೀಟರ್ ವರೆಗೆ ಹಿಂಬಾಲಿಸಲು ಯತ್ನಿಸಿದ್ದರು. ಅವರು ಆಕೆಯ ಕಾರಿನ ಮೇಲೆ ದಾಳಿ ಮಾಡಿದರು. ಇದು ಅಪಹರಣದ ಕಾನೂನನ ಅಡಿಯಲ್ಲಿ ಬರುವುದಿಲ್ಲವೇ ? ಚಂಡಿಗಢ ಪೊಲೀಸರ ಹೇಳಿಕೆಯಲ್ಲಿನ ಭಿನ್ನತೆ ಚಂಡಿಗಢ ಪೊಲೀಸರು ಬಿಜೆಪಿ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಸಾಬೀತು ಮಾಡುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಕೇಂದ್ರ ಸರಕಾರದ ನಿರ್ದೇಶನದಂತೆ ಪೊಲೀಸರು ಜಾಮೀನು ಸಹಿತ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.

 ಈ ಘಟನೆಯನ್ನು ಪೂರ್ಣವಾಗಿ ದಾಖಲಿಸಿಕೊಂಡ ಏಳು ವಿವಿಧ ಕ್ಯಾಮೆರಾಗಳಲ್ಲಿ ಐದು ಕ್ಯಾಮೆರಾಗಳ ದೃಶ್ಯಾವಳಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಬಿಜೆಪಿ ಹಾಗೂ ಚಂಡಿಗಢ ಆಡಳಿತ ಉತ್ತರ ನೀಡಬಲ್ಲುದೇ ? ಈ ಎಲ್ಲ ಕೆಮರಾಗಳು ಒಮ್ಮೆಲೆ ಕಾರ್ಯಾಚರಿಸುವುದನ್ನು ಹೇಗೆ ಸ್ಥಗಿತಗೊಳಿಸಿದವು. ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಅವರ ಮಕ್ಕಳನ್ನು ರಕ್ಷಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಉತ್ತರಿಸಬಲ್ಲರೇ ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

Read These Next

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...