ಮನುವಾದದ ವಿರುದ್ಧ ಪ್ರತಿಭಟನೆ: ಮಾ.10ರಂದು ‘ಚಲೋ ನಾಗಪುರ ’

Source: S O News service | By Staff Correspondent | Published on 7th March 2017, 11:35 PM | National News | Don't Miss |

ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಮನುವಾದ,ಬ್ರಾಹ್ಮಣವಾದ ಮತ್ತು ಹಿಂದುತ್ವದ ವಿರುದ್ಧ ತಮ್ಮ ಬಲವನ್ನು ಪ್ರದರ್ಶಿಸಲು ಸಹಸ್ರಾರು ಮಹಿಳೆಯರು ಮಾ.10ರಂದು ಆರೆಸ್ಸೆಸ್‌ನ ಕೇಂದ್ರ ಸ್ಥಾನವಾದ ಮಹಾರಾಷ್ಟ್ರದ ನಾಗ್ಪುರದಲ್ಲಿ ಸಮಾವೇಶಗೊಳ್ಳಲಿದ್ದಾರೆ.

 ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾರ್ಯಕರ್ತೆ ವಾಣಿ ಸುಬ್ರಮಣಿಯನ್ ಅವರು, ಮನುವಾದದಲ್ಲಿಯ ಗೊಡ್ಡು ಸಂಪ್ರದಾಯ ಮತ್ತು ಮೂಢನಂಬಿಕೆಗಳನ್ನು ಆಧರಿಸಿರುವ ಪುರುಷ ಪ್ರಧಾನ ಮನೋಸ್ಥಿತಿ ಮತ್ತು ಮಹಿಳೆಯರ ಸ್ವಾಂತಂತ್ರವನ್ನು ನಿರ್ಬಂಧಿಸುವ ಪುರುಷ ಪ್ರಾಧಾನ್ಯತೆಗಳಿಂದಾಗಿ ಮಹಿಳೆಯರು ಕಡೆಗಣಿಸಲ್ಪಟ್ಟಿದ್ದಾರೆ. ನಮ್ಮ ಸಂವಿಧಾನವು ನಮಗೆ ಖಚಿತಪಡಿಸಿರುವ ಹಕ್ಕುಗಳು ಮತ್ತು ರಕ್ಷಣೆಯ ಬಗ್ಗೆ ಧ್ವನಿಯೆತ್ತಲು ನಾವು ಒಂದಾಗಲಿದ್ದೇವೆ ಎಂದು ಹೇಳಿದರು.

 

  19ನೇ ಶತಮಾನದ ಖ್ಯಾತ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮತ್ತು ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆಯವರ 120ನೇ ಪುಣ್ಯತಿಥಿಯ ಅಂಗವಾಗಿ ಹಲವಾರು ಮಹಿಳಾ ಸಂಘಟನೆಗಳು ಮಾ.10ರಂದು ‘ಚಲೋ ನಾಗಪುರ ’ ರಾಷ್ಟ್ರವ್ಯಾಪಿ ಕರೆಯನ್ನು ನೀಡಿವೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...