ಎನ್.ಐ.ಎ ಯಿಂದ ಹಿಜ್ಬುಲ್, ಎಲ್‌ಇಟಿಯ ೧೨ ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

Source: sonews | By Staff Correspondent | Published on 18th January 2018, 11:47 PM | National News | Don't Miss |

ಹೊಸದಿಲ್ಲಿ: ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಲಷ್ಕರ್ ಎತೊಯ್ಬಾ ತಯ್ಯಿಬದ ವರಿಷ್ಠ ಹಾಫಿಝ್ ಸಯೀದ್ ಹಾಗೂ ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಸೇರಿದಂತೆ 12 ಮಂದಿಯ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಗುರುವಾರ ಆರೋಪ ಪಟ್ಟಿ ದಾಖಲಿಸಿದೆ. ಇಲ್ಲಿನ ನ್ಯಾಯಾಲಯದಲ್ಲಿ 1,279 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ತನಿಖೆ ಮುಂದುವರಿಸಲು ಅನುಮತಿ ಕೋರಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಆರೋಪಿಗಳ ನ್ಯಾಯಾಂಗ ಬಂಧನ ಗುರುವಾರಕ್ಕೆ ಅಂತ್ಯವಾಗಿದೆ.
ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳುತ್ತಿರುವ ಸಂಸ್ಥೆ 6 ತಿಂಗಳ ಒಳಗೆ ಆರೋಪ ಪಟ್ಟಿ ದಾಖಲಿಸದೇ ಇದ್ದರೆ, ಆರೋಪಿಗಳು ಜಾಮೀನಿಗೆ ಅರ್ಹರು. ತನಿಖೆ ಸಂದರ್ಭ ನಾವು ಗಣನೀಯ ಪ್ರಮಾಣದಲ್ಲಿ ದಾಖಲೆ ಹಾಗೂ ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಿದ್ದೇವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 60 ಸ್ಥಳಗಳಿಗೆ ದಾಳಿ ನಡೆಸಲಾಗಿದೆ. 950 ದೋಷಾರೋಪಣೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 300 ಸಾಕ್ಷಿಗಳು ಇದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...