ಬಿಡದಿಯ ನಿತ್ಯಾನಂದ ಸ್ವಾಮಿಗೆ ಜಾಮೀನು ರಹಿತ ವಾರಂಟ್

Source: sonews | By sub editor | Published on 6th September 2018, 11:35 PM | State News | Don't Miss |

ರಾಮನಗರ: ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿಯ ನಿತ್ಯಾನಂದ ಧ್ಯಾನಪೀಠದ ನಿತ್ಯಾನಂದ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಸತತ ಮೂರನೇ ಬಾರಿಗೆ ವಿಚಾರಣೆ ನಿತ್ಯಾನಂದ ಗೈರಾಗಿದ್ದ. ಈ ಬಗ್ಗೆ ಕಳೆದ ಬಾರಿಯ ವಿಚಾರಣೆಯಲ್ಲೇ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ನಿತ್ಯಾನಂದ ಪರ ವಕೀಲರಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಕಳೆದ ಎರಡು ವಿಚಾರಣೆ ವೇಳೆ ಪ್ರಕರಣದ ಪ್ರಮುಖ ಸಾಕ್ಷಿ ಲೆನಿನ್ ಕುರುಪ್ಪನ್ ವಿಚಾರಣೆ ನಡೆಸುವಾಗಲೂ ಸಹ ನಿತ್ಯಾನಂದ ಹಾಜರಾಗಿರಲಿಲ್ಲ.

ಕಳೆದ ವಿಚಾರಣೆಯಲ್ಲಿ ಸಿಐಡಿ ಪರ ವಕೀಲರು ವಿಚಾರಣೆಯನ್ನ ಮಂದಗತಿಗೆ ದೂಡುವ ಯತ್ನ ನಡೆಸಲಾಗುತ್ತಿದೆ. ಅಲ್ಲದೇ ಸುಪ್ರೀಂ ಕೋರ್ಟ್‍ನ ಆದೇಶವಿದ್ದರೂ ನಿತ್ಯಾನಂದ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಗುರುವಾರ ನಡೆದ ವಿಚಾರಣೆಯಲ್ಲಿಯೂ ಗೈರಾದ ಹಿನ್ನೆಲೆಯಲ್ಲಿ ನಿತ್ಯಾನಂದನಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ, ಪ್ರಕರಣದ ವಿಚಾರಣೆಯನ್ನು ಇದೇ ಸೆಪ್ಟೆಂಬರ್ ತಿಂಗಳ 14ಕ್ಕೆ ಮುಂದೂಡಿದ್ದಾರೆ.

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...