ಹಬ್ಬಕ್ಕೆ ದುಂದು ವೆಚ್ಚ ಬೇಡ ; ದಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

Source: sonews | By Staff Correspondent | Published on 18th August 2018, 6:17 PM | Coastal News | State News | Don't Miss |

ಮಂಗಳೂರು : ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೇರಳ ಮತ್ತು ಕೊಡಗು ಜಿಲ್ಲೆಯ ಜನತೆಗೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಎಲ್ಲರೂ ಸಾಧ್ಯವಿರುವ ಗರಿಷ್ಟ ನೆರವು ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಕರೆ ನೀಡಿದ್ದಾರೆ.

 

ಶತಮಾನದಲ್ಲೇ ಭೀಕರ ಮಳೆ ಮತ್ತು ಪ್ರವಾಹಕ್ಕೆ ಬಹುತೇಕ ಕೇರಳ ಮುಳುಗಿ ಹೋಗುವಂತಹ ಪರಿಸ್ಥಿತಿಗೆ ತಲುಪಿದೆ. ರಾಜ್ಯದ ಹೆಚ್ಚಿನ ಎಲ್ಲ ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು ಲಕ್ಷಾಂತರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನೂರಾರು ಜನರು ಪ್ರಾಣ ಕಳಕೊಂಡಿದ್ದಾರೆ. ಮಹಿಳೆಯರು, ಮಕ್ಕಳು ಇಂತಹ ಸಂದರ್ಭದಲ್ಲಿ ಅತ್ಯಂತ ಹೆಚ್ಚು ಸಮಸ್ಯೆಗೆ ಈಡಾಗುತ್ತಾರೆ. ಮೊದಲೇ ಬಡತನ ಎದುರಿಸುತ್ತಿರುವ ಜನರು ಇಂತಹ ಸಂದರ್ಭದಲ್ಲಿ ಕಂಗಾಲಾಗಿ ಬಿಟ್ಟಿರುತ್ತಾರೆ. ಪ್ರಾಣಭಯದ ಜೊತೆ ಊಟ, ತಿಂಡಿ ಜೊತೆ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಅಲ್ಲಿದೆ. ಅದರ ಜೊತೆಗೆ ನಮ್ಮ ರಾಜ್ಯದ ಕೊಡಗು ಜಿಲ್ಲೆ ಕೂಡ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಜೋಡುಪಾಲದಲ್ಲೂ ಪ್ರವಾಹದಿಂದ ಭಾರೀ ಅನಾಹುತವಾಗಿ ಜೀವ ಹಾನಿಯಾಗಿದೆ. ಈ ಚಿಂತಾಜನಕ ಪರಿಸ್ಥಿತಿಗೆ ಪ್ರತಿಯೊಬ್ಬ ಮನುಷ್ಯ ಹೃದಯ  ಸ್ಪಂದಿಸುವುದು ಅತ್ಯಗತ್ಯ ಎಂದು ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಹೇಳಿದ್ದಾರೆ.

ಪ್ರವಾಹ ಪೀಡಿತ ಜನರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮರು ಗರಿಷ್ಟ ನೆರವು ನೀಡಲು ಮುಂದಾಗಬೇಕು. ತ್ಯಾಗ, ಬಲಿದಾನಗಳ ಪ್ರತೀಕವಾದ ಬಕ್ರೀದ್ ಸಂದರ್ಭದಲ್ಲಿ ಹಬ್ಬದ ಹೆಸರಲ್ಲಿ ದುಂದು ವೆಚ್ಚ ಮಾಡದೆ ಸಾಧ್ಯವಾದಷ್ಟು ಹಣವನ್ನು ಪ್ರವಾಹ ಪೀಡಿತರಿಗೆ ತಲುಪಿಸುವ ಸರಕಾರಿ ಇಲಾಖೆಗಳಿಗೆ ಅಥವಾ ಸೂಕ್ತ ಸಂಸ್ಥೆಗಳಿಗೆ ನೀಡಬೇಕು. ಇದು ಪ್ರತಿಯೊಬ್ಬ ಮುಸ್ಲಿಮನ ಕರ್ತವ್ಯವಾಗಿದೆ ಎಂದು ಖಾಝಿ ಅವರು ಹೇಳಿದ್ದಾರೆ.

Read These Next

ಜೂನ್ 29ರಿಂದ ಜುಲೈ 9 ರವರೆಗೆ  ಅಳ್ವೆಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...