ನೋಟು ರದ್ದತಿ ಪರಿಣಾಮ: ಬೆಳೆಗೆ ಬೆಲೆ ಇಲ್ಲದೆ ಕಂಗಾಲಾದ ರೈತ

Source: S O News | By MV Bhatkal | Published on 26th December 2016, 8:17 PM | National News | Don't Miss |

ನವದೆಹಲಿ; ಸಗಟು ವ್ಯಾಪಾರ ಮಾರುಕಟ್ಟೆಯಲ್ಲಿ ಬೆಲೆ ಪಾತಾಳಕ್ಕಿಳಿದಿರುವುದರಿಂದ ಬೆಳೆದ ಬೆಳೆಗೆ ಬೆಲೆ ಇಲ್ಲದೆ, ಕೈಯಲ್ಲಿ ಕಾಸೂ ಇಲ್ಲದೆ ಪರದಾಡುವ ಸ್ಥಿತಿ ದೇಶದಾದ್ಯಂತವಿರುವ ರೈತರದ್ದು. ಈರುಳ್ಳಿ, ಟೊಮೆಟೊ, ಹೂಕೋಸು, ಆಲೂಗೆಡ್ಡೆ ಬೆಳೆಯುವ ರೈತರ ಜೀವನದಲ್ಲಿ ನೋಟು ಸಮಸ್ಯೆ ಯಾವ ರೀತಿಯ ಪರಿಣಾಮ ಬೀರಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿಯೊಂದನ್ನು ತಯಾರಿಸಿದೆ.

ಆಂಧ್ರ ಪ್ರದೇಶ
ಕಳೆದ ಬುಧವಾರ ಅನಂತಪುರ ಜಿಲ್ಲೆಯ ಎಸ್ ರಾಜು ಎಂಬವರು ಬೋವೆನ್‍ಪಳ್ಳಿ ಮಾರುಕಟ್ಟೆಗೆ ಟೊಮೆಟೊ ಮಾರಲು ಬಂದು ಬರಿಗೈಲಿ ವಾಪಾಸಾಗಿದ್ದಾರೆ.

ಒಂದು ಕೆಜಿ ಟೊಮೆಟೊದ ಬೆಲೆ ₹4 ಇದ್ದರೂ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಒಂದು ಕೆಜಿ ಟೊಮೆಟೊಗೆ ₹ 2 ಕೊಡುವುದಾಗಿ ಹೇಳಿದ್ದರು. ಅನಂತಪುರದಿಂದ 400 ಕಿಮಿ ಸಂಚರಿಸಿ ಮಾರುಕಟ್ಟೆಗೆ ಬರುವುದಕ್ಕೇ ಖರ್ಚು ಜಾಸ್ತಿಯಿರುವಾಗ ಅಷ್ಟೊಂದು ಕಡಿಮೆ ಬೆಲೆಗೆ ಟೊಮೆಟೊ ಮಾರಲು ಸಾಧ್ಯವಾಗದೆ ನಿರಾಶರಾದ ರಾಜು ತಾನು ತಂದಿದ್ದ ಟೊಮೆಟೊಗಳನ್ನು ಮಾರುಕಟ್ಟೆಯ ರಸ್ತೆಗೆ ಸುರಿದಿದ್ದಾರೆ. ಅನಂತಪುರ ಮಾತ್ರವಲ್ಲ ರಾಯಲಸೀಮೆಯಲ್ಲಿರುವ ರೈತರ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ.

ಉತ್ತರ ಪ್ರದೇಶ
ಉತ್ತರ ಪ್ರದೇಶದ ಆಲೂಗೆಡ್ಡೆ ಬೆಳೆಗಾರರೂ ಸಂಕಷ್ಟ ಎದುರಿಸುತ್ತಿದ್ದಾರೆ, ಜುಲೈ- ಆಗಸ್ಟ್ ತಿಂಗಳಲ್ಲಿ ಆಲೂಗೆಡ್ಡೆ ಕ್ವಿಂಟಲ್‍ಗೆ ₹1,500ಕ್ಕೆ ಮಾರಾಟವಾಗುತ್ತಿತ್ತು. ಮುಂದಿನ ದಿನಗಳಲ್ಲಿ ಬೆಲೆ ಇನ್ನೂ ಏರಿಕೆಯಾಗಬಹುದೆಂದು ರೈತರು ಊಹಿಸಿದ್ದರು. ಆದರೆ ಹಾಗಾಗಲಿಲ್ಲ ಎಂದು ಆಲೂಗೆಡ್ಡೆ ಕೃಷಿಕರೊಬ್ಬರು ಹೇಳಿದ್ದಾರೆ. ದೇಶದಲ್ಲಿ ಶೇ. 35-40 ಆಲೂಗೆಡ್ಡೆ ಕೃಷಿ ಉತ್ತರ ಪ್ರದೇಶದಲ್ಲಿ ಬೆಳೆಯಲಾಗುತ್ತದೆ.

ಮಧ್ಯಪ್ರದೇಶ
ಮಂದಸೌರ್ -ನೀಮುಚ್ ಪ್ರದೇಶದಲ್ಲಿನ ರೈತರು ಅತೀ ಕಡಿಮೆ ಬೆಲೆಗೆ ಈರುಳ್ಳಿ ಮಾರಲೇಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಇಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ ₹1 !
ನಗದು ಸಮಸ್ಯೆ ಇರುವ ಕಾರಣ ಕೃಷಿ ಉತ್ಪನ್ನಗಳನ್ನು ಖರೀದಿಸಲು ವ್ಯಾಪಾರಿಗಳು ಮುಂದಾಗುತ್ತಿಲ್ಲ. ನಗದು ರಹಿತ ವಹಿವಾಟು ನಡೆಸುವ ಬಗ್ಗೆ ಆದಾಯ ತೆರಿಗೆ ಇಲಾಖೆ ಸಲಹೆ ನೀಡಿದರೂ ವ್ಯಾಪಾರಿಗಳು ಇದಕ್ಕೆ ಒಪ್ಪುತ್ತಿಲ್ಲ ಎಂದು ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ ₹6 ಇತ್ತು ಆದರೆ ಈಗ ನೀಮುಚ್‍ನಲ್ಲಿ ಈರುಳ್ಳಿ ಕೆಜಿ ಬೆಲೆ 25 ಪೈಸೆ ಆಗಿದೆ.


ಬಿಹಾರ
ಪಾಟ್ನಾ, ವೈಸಾಲಿ, ಮುಜಾಫರ್ ನಗರ್ ಮತ್ತು ಇತರ ಜಿಲ್ಲೆಗಳಲ್ಲಿ ಹೂಕೋಸು ಬೆಳೆಗಾರರು ಅಕ್ಷರಶಃ ಬೀದಿಗೆ ಬಂದಿದ್ದಾರೆ. ಮಾರುಕಟ್ಟೆಯಲ್ಲಿ ಒಂದು ಕೆಜಿ ಹೂಕೋಸಿನ ಬೆಲೆ ₹10- 15 ಆಗಿದೆ. ಸಗಟು ಮಾರುಕಟ್ಟೆಯಲ್ಲಿ ಇದರ ಬೆಲೆ ಮೂರನೇ ಒಂದರಷ್ಟಕ್ಕೆ ತಲುಪಿದೆ.

ಈ ವರ್ಷ ಉತ್ತಮ ಫಸಲು ಬಂದಿತ್ತು. ಉತ್ಪನ್ನದ ಬೆಲೆ ಕುಸಿಯಲು ಇದೂ ಕಾರಣ ಅಂತಾರೆ ಅಲ್ಲಿವ ವ್ಯಾಪಾರಿ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...