ತಾಲೂಕಾ ಆಸ್ಪತ್ರೆಯಲ್ಲಿ ಪೋಷಣ ಮಾಸಾಚರಣೆ

Source: sonews | By Staff Correspondent | Published on 22nd September 2018, 11:20 PM | Coastal News |

ಮುಂಡಗೋಡ:   ತಾಲೂಕಾ ಆಸ್ಪತ್ರೆಯ ಸಭಾಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
 
ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ತಾಲೂಕಾ ಆರೋಗ್ಯಾಧಿಕಾರಿ ಪದ್ಮಪ್ರಿಯ ಕಾರ್ಯಕ್ರಮ ಉದ್ಘಾಟಿಸಿದರು. ಸಿಡಿಪಿಒ ಎಚ್.ಬಿ.ಬೇಲಪತ್ತಾರ ಪ್ರಾಸ್ತವಿಕ ಮಾತನಾಡಿ, ರಾಷ್ಟ್ರಾದ್ಯಂತ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಜಾಗೃತಿ ಮೂಡಿಸಿ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕ ಆಹಾರವಿಲ್ಲದೇ ಮರಣ ಹೊಂದುತ್ತಿರುವ ಬಗ್ಗೆ ಕೇಳಿಬರುತ್ತಿರುವುದರಿಂದ ಕೇಂದ್ರ ಸರ್ಕಾರವು ಎಲ್ಲರಿಗೂ ಪೌಷ್ಟಿಕ ಆಹಾರ ಸಿಗುವಂತಾಗಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಭಾಗದಲ್ಲಿರುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಊಟದ ಪದ್ದತಿಯನ್ನು ತಿಳಿಹೇಳಬೇಕು ಎಂದರು ಮತ್ತು ತಾಲೂಕಿನಲ್ಲಿ 428ಫಲಾನುಭವಿಗಳು ಮಾತೃವಂದನಾ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಹಾಗೂ ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಶೇ.80ರಷ್ಟು ಪೌಷ್ಟಿಕ ಆಹಾರ ನೀಡಲಾಗಿದೆ ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹತ್ತು ಗರ್ಭಿಣಿಯರಿಗೆ ಉಡಿ ತುಂಬುವ ಮೂಲಕ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳ ಛದ್ಮವೇಷ ರೂಪಕಗಳು ಗಮನ ಸೆಳೆದವು. 

ಈ ವೇಳೆ ವೈದ್ಯ ಬಿರಾದಾರ, ಶ್ಯಾಮಲಾ ನಾಯ್ಕ, ಮೇಲ್ವಿಚಾರಕಿಯರಾದ ಸುರೇಖಾ ಮಲ್ಲಾಪುರ, ದೀಪಾ ಬಂಗೇರ, ಪುಷ್ಪಾ ಹಂಚಗಿ, ಪೂರ್ಣಿಮಾ ದೊಡ್ಡಮನಿ, ರೂಪಾ ಅಂಗಡಿ ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಸ್ತೂರಿ ಹರಿಜನ ಪ್ರಾರ್ಥಿಸಿದರು. ರೂಪಾ ಅಂಗಡಿ ಸ್ವಾಗತಿಸಿದರು. ದೀಪಾ ಬಂಗೇರ ವಂದಿಸಿದರು.     
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...