'ಭಟ್ಕಳ ಬೈಲೂರಿನಲ್ಲಿ ನಿಶ್ಚಯವಾದ ಬಾಲ್ಯ ವಿವಾಹವನ್ನು ತಡೆದ ಇಲಾಖೆ ಅಧಿಕಾರಿಗಳು'

Source: S.O. News Service | By MV Bhatkal | Published on 21st October 2018, 7:02 PM | Coastal News | Don't Miss |

ಭಟ್ಕಳ: ಇಲ್ಲಿನ ಬೈಲೂರಿನ ಗುಡಿಗಾರಬೋಲೆಯ ಸಮೀಪ 17 ವರ್ಷದ 1 ತಿಂಗಳ ಮುಸ್ಲಿಂ ಹುಡುಗಿಗೆ ಅದೇ ಊರಿನ 24 ವರ್ಷದ ಯುವಕನೊಂದಿಗೆ ಬಾಲ್ಯ ವಿವಾಹ ನಿಶ್ಚಯವಾಗಿದ್ದು ಈ ಬಗ್ಗೆ ಮಾಹಿತಿ ತಿಳಿದ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸುಶೀಲಾ ಮೊಗೇರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ ನಿಶ್ಛಯವಾದ ಮದುವೆಯನ್ನು ನಿಲ್ಲಿಸಿರುವದು ತಡವಾಗಿ ಬೆಳಕಿಗೆ ಬಂದಿದೆ.
ಈ ಭಾಗದ ಸ್ಥಳಿಯರು ನೀಡಿದ ಮಾಹಿತಿಯನ್ನಾಧರಿಸಿ ನಿಶ್ಚಯವಾದ ಬಾಲ್ಯ ವಿವಾಹದ ಮನೆಗೆ ನೀಡಿದ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸುಶೀಲಾ ಮೊಗೇರ, ಅಂಗನವಾಡಿ ಮೇಲ್ವಿಚಾರಕಿ, ಮಹಿಳಾ ಸಾಂತ್ವನ ಕೇಂದ್ರ ಮತ್ತೂ ಮಹಿಳಾ ಪೊಲೀಸ್ ಕಾನ್ಸಟೇಬಲಗಳನ್ನೊಳಗೊಂಡ ತಂಡ ಭೇಟಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಮನೆಯವರಲ್ಲಿ ವಿಚಾರಿಸಿದ್ದಾಗ ಮುಂದಿನ ಎರಡು ತಿಂಗಳ ನಂತರ ಮನೆಯಲ್ಲಿಯೇ ಬಾಲ್ಯ ವಿವಾಹದ ಬಗ್ಗೆ ಮನೆಯವರು ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳು ಬಾಲ್ಯ ವಿವಾಹದ ಬಗ್ಗೆ ಕಾನೂನಿನ ಸಂಪೂರ್ಣ ಮಾಹಿತಿ ಹಾಗೂ ಬಾಲ್ಯ ವಿವಾಹ ಕಾನೂನು ಅಪರಾಧ ಎಂಬೆಲ್ಲರದ ಕುರಿತಾಗಿ ಎರಡು ಕುಟುಂಬದವರಿಗೆ ನೀಡಿ ಕುಟುಂಬದವರಿಂದ ಮದುವೆ ಮಾಡಿಸದಂತೆ ಮುಚ್ಚಳಿಕೆ ಬರೆಯಿಸಿಕೊಂಡು ಹುಡುಗಿಗೆ 18 ವರ್ಷ ತುಂಬಿದೆ ಮೇಲೆ ಮದುವೆ ಆಗಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆ ಸಲಹೆಯನ್ನು ನೀಡಿದ್ದಾರೆ. ಹುಡುಗಿ ಮನೆಯವರು ತೀರಾ ಬಡವರಾಗಿದ್ದು ಒಳ್ಳೆಯ ಸಂಬಂಧ ಕೂಡಿ ಬಂದ ಹಿನ್ನೆಲೆ ಮದುವೆಗೆ ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಹುಡುಗನು ಬೆಂಗಳುರಿನಲ್ಲಿ ಕೆಲಸ ಮಾಡುತ್ತಿದ್ದು ಒಳ್ಳೆಯ ಉದ್ಯೋಗದಲ್ಲಿದ್ದಾನೆಂದು ತಿಳಿದು ಬಂದಿದೆ. 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...