ಇಂಧನ ಬೆಲೆ ಏರಿಕೆಯಿಂದ ಮೋದಿಯವರ ಅಚ್ಛದಿನ್ ಅಣಕು; ಶಿವಸೇನ ಆರೋಪ

Source: sonews | By sub editor | Published on 30th August 2018, 12:03 AM | National News | Don't Miss |

ಮುಂಬೈ: ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸಿರುವ ಎನ್‌ಡಿಎ ಮೈತ್ರಿಕೂಟದ ಹಿರಿಯ ಸಹಪಕ್ಷ ಶಿವಸೇನೆ, ಅಚ್ಛೇದಿನ್ ಹಾಗಿರಲಿ, ಮೊದಲು ಜನರಿಗೆ ಸ್ಥಿರವಾದ ಜೀವನ ಖಾತರಿಗೊಳಿಸಿ ಎಂದು ಸಲಹೆ ನೀಡಿದೆ.

ಎನ್‌ಡಿಎ ಸರಕಾರದ ಅವಧಿಯಲ್ಲಿ ತೈಲ ಬೆಲೆ ಎಷ್ಟು ಬಾರಿ, ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿಯನ್ನು ದೇಶದಲ್ಲಿರುವ ಪೆಟ್ರೋಲ್ ಪಂಪ್‌ಗಳಲ್ಲಿ ಪ್ರದರ್ಶಿಸಿ, ಅದರ ಬಳಿ ಪ್ರಧಾನಿ ಮೋದಿಯ ಭಾವಚಿತ್ರ ತೂಗುಹಾಕುವಂತೆ ತಿಳಿಸಲಾಗಿದೆ ಎಂದು ಶಿವಸೇನೆ ತಿಳಿಸಿದೆ.

ಈ ಹಿಂದೆ ತೈಲ ಬೆಲೆ ಸಾರ್ವಕಾಲಿಕ ಗರಿಷ್ಟಮೊತ್ತ ತಲುಪಿದಾಗ ಕೇಂದ್ರ ಸರಕಾರ ಮಧ್ಯಪ್ರವೇಶಿಸಿದ್ದು ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಈ ನೆಮ್ಮದಿ ಕ್ಷಣಿಕವಾಗಿದೆ. ಈಗ ಮತ್ತೆ ಬೆಲೆಗಳು ಗಗನಕ್ಕೇರಿವೆ ಎಂದು ಪಕ್ಷದ ಮುಖವಾಣಿ ‘ಸಾಮ್ನ’ದ ಸಂಪಾದಕೀಯ ಬರಹದಲ್ಲಿ ಟೀಕಿಸಲಾಗಿದೆ. ತೈಲ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲಾಗದು ಎಂದು ಸರಕಾರ ತಿಳಿಸಿರುವ ಕಾರಣ ಕಡಿಮೆ ದರದಲ್ಲಿ ತೈಲಗಳು ಲಭ್ಯವಾಗಲಿವೆ ಎಂಬ ನಿರೀಕ್ಷೆ ಕನಸಿನ ಮಾತಾಗಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಮೋದಿಯವರ ಫೋಟೋ ಪ್ರದರ್ಶಿಸಬೇಕೆಂದು ಸರಕಾರ ಆದೇಶಿಸಿರುವುದಾಗಿ ಹೇಳಲಾಗುತ್ತಿದೆ. ಇದು ನಿಜವಾದಲ್ಲಿ, ಆ ಫೋಟೋದ ಕೆಳಭಾಗದಲ್ಲಿ ಮೋದಿ ಸರಕಾರದ ಅವಧಿಯಲ್ಲಿ ತೈಲ ಬೆಲೆಗಳ ದರ ಹೆಚ್ಚಳದ ಮಾಹಿತಿಯನ್ನೂ ನಮೂದಿಸಬೇಕು ಎಂದು ಶಿವಸೇನೆ ಹೇಳಿದೆ.

Read These Next

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...