ಏಕದಿನ ಕ್ರಿಕೆಟ್‌; ಇಂಗ್ಲೆಂಡ್ ತಂಟದಿಂದ ವಿಶ್ವ ದಾಖಲೆ

Source: sonews | By sub editor | Published on 19th June 2018, 11:33 PM | Global News | Sports News | Don't Miss |

ನಾಟಿಂಗ್‌ಹ್ಯಾಮ್: ಆಸ್ಟ್ರೇಲಿಯ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೂತನ ವಿಶ್ವ ದಾಖಲೆ ನಿರ್ಮಿಸಿದೆ.

ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 481 ರನ್ ಗಳಿಸಿತು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ಗಳಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿತು.

ಎರಡು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ನಾಟಿಂಗ್‌ಹ್ಯಾಮ್ ಮೈದಾನದಲ್ಲೇ 3 ವಿಕೆಟ್ ನಷ್ಟಕ್ಕೆ 444 ರನ್ ಗಳಿಸಿದ್ದ ಇಂಗ್ಲೆಂಡ್ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಮೊತ್ತ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿತ್ತು.ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದೆ.

ಅಗ್ರ ಸರದಿ ದಾಂಡಿಗರಾದ ಜಾನಿ ಬೈರ್‌ಸ್ಟೋವ್ 139 ರನ್(92 ಎಸೆತ, 15 ಬೌಂಡರಿ, 5 ಸಿಕ್ಸರ್) ಹಾಗೂ ಅಲೆಕ್ಸ್ ಹೇಲ್ಸ್ 147 ರನ್(92 ಎಸೆತ, 16 ಬೌಂಡರಿ, 5 ಸಿಕ್ಸರ್) ಭರ್ಜರಿ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾಣಿಕೆ ನೀಡಿದರು.

ಆರಂಭಿಕ ಆಟಗಾರ ಜೇಸನ್ ರಾಯ್(82) ಹಾಗೂ ನಾಯಕ ಇಯಾನ್ ಮೊರ್ಗನ್(67)ಕೂಡ ಮಹತ್ವದ ಕೊಡುಗೆ ನೀಡಿದರು.

ರಾಯ್ ಹಾಗೂ ಬೈರ್‌ಸ್ಟೋವ್ ಮೊದಲ ವಿಕೆಟ್‌ಗೆ 159 ರನ್ ಸೇರಿಸುವ ಮೂಲಕ ದೊಡ್ಡ ಸ್ಕೋರ್‌ಗೆ ಭದ್ರಬುನಾದಿ ಹಾಕಿದರು. ರಾಯ್ ಔಟಾದ ಬಳಿಕ ಬೈರ್‌ಸ್ಟೋವ್ ಹಾಗೂ ಹೇಲ್ಸ್ 2ನೇ ವಿಕೆಟ್‌ಗೆ 151 ರನ್ ಸೇರಿಸಿ ಆಸ್ಟ್ರೇಲಿಯ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದರು.

ಹೇಲ್ಸ್ ನಾಯಕ ಮೊರ್ಗನ್‌ರೊಂದಿಗೆ 4ನೇ ವಿಕೆಟ್‌ಗೆ 124 ರನ್ ಜೊತೆಯಾಟ ನಡೆಸಿ ಇಂಗ್ಲೆಂಡ್ 48ನೇ ಓವರ್‌ನಲ್ಲಿ 459 ರನ್ ಗಳಿಸಲು ನೆರವಾದರು.

ಆಸ್ಟ್ರೇಲಿಯ 8 ಬೌಲರ್‌ಗಳನ್ನು ದಾಳಿಗಿಳಿಸಿತು. ರಿಚರ್ಡ್‌ಸನ್(3-92) ಮಾತ್ರ ಯಶಸ್ವಿ ಬೌಲರ್ ಎನಿಸಿಕೊಂಡರು.

 

Read These Next

ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕರೆ

ಭಟ್ಕಳ:  ವಿದ್ಯಾರ್ಥಿಗಳು  ಪಟ್ಯಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ...

ಫಿಫಾ ವಿಶ್ವಕಪ್ 2018: ಸೌತ್ ಕೊರಿಯಾ vs ಸ್ವೀಡನ್: 60 ವಷರ್ಗಳ ಬಳಿಕ ಮೊದಲ ಪಂದ್ಯ ಗೆದ್ದ ಸ್ವೀಡನ್

ಮಾಸ್ಕೋ: ಫಿಫಾ ವಿಶ್ವಕಪ್ 2018ರ 'ಎಫ್' ಗುಂಪಿನ ಸೌತ್ ಕೊರಿಯಾ ಹಾಗೂ ಸ್ವೀಡನ್ ತಂಡಗಳ ನಡುವಣ ಪಂದ್ಯದಲ್ಲಿ ಸ್ವೀಡನ್ 1-0 ಅಂತರದ ಜಯಗಳಿಸಿ ...

ವಿಕಲಚೇತನ ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಪೋಷಿಸುತ್ತಿರುವ ಸ್ನೇಹ ಶಾಲೆ-ಎಂ.ವಿ.ಹೆಗಡೆ

ಭಟ್ಕಳ: ವಿಶೇಷ ಚೇತನ ಮಕ್ಕಳಿಗೆ ಒಂದು ಶಾಲೆಯನ್ನು ತೆರೆದು ಅವರಿಗೆ ಸೇವೆ ನೀಡುತ್ತಿರುವ ಸ್ನೇಹ ವಿಶೇಷ ಮಕ್ಕಳ ಶಾಲೆಯ ಮಾಲತಿ ...