ಲಾಹೋರ್: ಕ್ರಿಸ್‌ಮಸ್ ಹಬ್ಬಕ್ಕೆ ಕಳ್ಳು ಕುಡಿದು ೩೦ಸಾವು 

Source: S O News service | By sub editor | Published on 27th December 2016, 11:34 PM | National News | Global News | Don't Miss |

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕ್ರಿಸ್‌ಮಸ್‌ನ ಹಬ್ಬದ ಸಂತೋಷಾಚರಣೆಗಾಗಿ ಹಬ್ಬದ ಮುನ್ನಾ ದಿನ ಕಳ್ಳಭಟ್ಟಿ ಸರಾಯಿ ಕುಡಿದು ಮೂವತ್ತು ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜರಗಿದ್ದು ಈ ಘಟನೆಎಯಲ್ಲಿ ೬೦ ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. 

 ಡಿಸೆಂಬರ್ 24ರಂದು ಲಾಹೋರ್‌ನ ಟೊಬಾ ಟೆಕ್ ಸಿಂಗ್ ನಗರದಲ್ಲಿರುವ ಮುಬಾರಕ್‌ಬಾದ್ ಕ್ರೈಸ್ತ ಕಾಲನಿಯಲ್ಲಿ ಈ ಘಟನೆ ನಡೆದಿದೆ. ಕಳ್ಳಭಟ್ಟಿ ದುರಂತದ ತನಿಖೆಗಾಗಿ, ವಿಚಾರಣಾ ಸಮಿತಿಯೊಂದನ್ನು ಅಧಿಕಾರಿಗಳು ರಚಿಸಿದ್ದಾರೆ. ವಿಷಪೂರಿತ ಮದ್ಯವನ್ನು ಆಕ್ರಮವಾಗಿ ತಯಾರಿಸಿದ ಆರೋಪದಲ್ಲಿ, ಓರ್ವ ತಂದೆ ಹಾಗೂ ಮಗನನ್ನು ಬಂಧಿಸಲಾಗಿದೆಯೆಂದು ಲಾಹೋರ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಮದ್ಯತಯಾರಿಕಾ ಘಟಕಗಳ ಕಾರ್ಯನಿರ್ವಹಗೆ ಅನುಮತಿ ನೀಡಲಾಗಿದ್ದರೂ, ಮುಸ್ಲಿಮರಿಗೆ ಮದ್ಯಮಾರಾಟ ಹಾಗೂ ಮದ್ಯಸೇವನೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೋಳಿಹಬ್ಬದ ಆಚರಣೆಯಲ್ಲಿ ಸಂದರ್ಭದಲ್ಲಿ ಕಳ್ಳಭಟ್ಟಿ ಮದ್ಯವನ್ನು ಸೇವಿಸಿದ್ದರಿಂದ 35 ಮಂದಿ ಹಿಂದೂಗಳು ಸಹಿತ ಒಟ್ಟು 45 ಮಂದಿ ಸಾವನ್ನಪ್ಪಿದ್ದರು.

Read These Next

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...