ಡೀಸೆಲ್ ಟ್ಯಾಂಕರ್ ಏಕಾಏಕಿ ಪಲ್ಟಿ; ಓರ್ವ ಸಜೀವ ದಹನ

Source: S O News service | By sub editor | Published on 19th June 2018, 5:31 PM | State News |

ಚಿಕ್ಕಮಗಳೂರು: ಕಡೂರಿನಿಂದ ಹೊಸಂಗಡಿಗೆ ಹೋಗುತಿದ್ದ ಡೀಸೆಲ್ ಟ್ಯಾಂಕರ್ ಏಕಾಏಕಿ ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತುಕೊಂಡು ಓರ್ವ ಸಜೀವ ದಹನವಾಗಿದ್ದಾರೆ ಎನ್ನಲಾದ ಘಟನೆ ಮಂಗಳವಾರ ಸಂಜೆಯ ಸುಮಾರಿಗೆ ಕಡೂರು ತಾಲ್ಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದ್ದು, ಘಟನೆಯಿಂದ ಐದು ಮನೆಗಳು ಸೇರಿ ಟ್ಯಾಂಕರ್ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತಿದ್ದಾರೆ. ಬೆಂಕಿಯಿಂದ ಗಂಭೀರವಾಗಿ ಗಾಯಗೊಂಡ ಕ್ಲೀನರ್ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ಸ್ಥಳಕ್ಕೆ ಕಡೂರು ಪೊಲೀಸರು ಆಗಮಿಸಿದ್ದಾರೆ. 

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...