ದೈಹಿಕ ಶಿಕ್ಷಣ ಅಧೀಕ್ಷಕ ಶ್ರೀಕಾಂತ್ ನಾಯಕರಿಗೆ ಸನ್ಮಾನ

Source: sonews | By sub editor | Published on 10th July 2018, 5:27 PM | Coastal News | Don't Miss |

ಭಟ್ಕಳ: ಭಟ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ದೈಹಿಕ ಶಿಕ್ಷಣ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಕಾಂತ್ ನಾಯಕರನ್ನು ನ್ಯೂಶಮ್ಸ್ ಶಾಲಾ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು ತಮ್ಮ ಸೇವಾವಧಿಯಲ್ಲಿ ರಾಜ್ಯ ಹಾಗೂ ವಲಯಮಟ್ಟದ ಕ್ರಿಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿದ್ದೇನೆ. ಇದಕ್ಕಾಗಿ ಎಲ್ಲರ ಸಹಾಯ ಸಹಕಾರ ನನಗೆ ಸಿಕ್ಕಿದೆ. ಶಮ್ಸ್ ಶಾಲೆಯು ವಿನೂತನ ರೀತಿಯಲ್ಲಿ ಚಟುವಟಿಕೆಗಳನ್ನು ಆಯೋಜಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಕ್ರೀಯಶೀಲತೆ ಹಾಗೂ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ ಎಂದರು. 

ಸನ್ಮಾನಿಸಿ ಮಾತನಾಡಿದ ಶಾಲಾ ಮುಖ್ಯೋಪಾದ್ಯಾಯ ಎಂ.ಆರ್.ಮಾನ್ವಿ, ದೈಹಿಕ ಶಿಕ್ಷಣ ಅಧೀಕ್ಷರಾಗಿರುವ ಶ್ರೀಕಾಂತ್ ನಾಯಕರು ಮುಂದಿನ ವರ್ಷ ನಿವೃತ್ತಿಯಾಗಲಿದ್ದು ಇವರು ತಾಲೂಕಿನ ಎಲ್ಲ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನಿಟ್ಟುಕೊಂಡಿದ್ದಾರೆ. ಉತ್ತಮ ಸಂಘಟಕರಾಗಿರುವ ಇವರು ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಪ್ರೋತ್ಸಾಹ ನೀಡುತ್ತಿರುವುದು ಶಿಕ್ಷಣ ಇಲಾಖೆಗೆ ಮಾದರಿಯಾಗಿದ್ದಾರೆ ಎಂದರು. 

ಈ ಸಂದರ್ಭದಲ್ಲಿ ಸ್ಕೂಲ್ ಬೋರ್ಡ್ ಅಧ್ಯಕ್ಷ ಕಾದಿರ್ ಮೀರಾ ಪಟೇಲ್, ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಮೌಲಾನ ಅಝೀಝುರ್ರಹ್ಮಾನ್ ನದ್ವಿ, ಅಂಜುಮನ್ ಸ್ಕೂಲ್ ಬೋರ್ಡ ಕಾರ್ಯದರ್ಶಿ ಮೋಹಸಿನ್ ಶಾಬಂದ್ರಿ, ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಮುಷ್ತಾಖ್ ಆಹ್ಮದ್ ಭಾವಿಕಟ್ಟೆ, ಪ್ರಾಥಮಿ ವಿಭಾಗ ದೈಹಿಕ ಶಿಕ್ಷಣ ಅಧೀಕ್ಷಕ ಎಸ್.ಆರ್.ಗೊಂಡ, ಮುಸ್ಲಿಮ್ ಜಿದ್ದಾ ಮಾಜಿ ಕಾರ್ಯದರ್ಶಿ ನೋಮಾನ್ ಅಲಿ ಅಕ್ಬರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...